ADVERTISEMENT

ಪ್ರವಾಹಪೀಡಿತ ಪ್ರದೇಶಕ್ಕೆ ಬನ್ನಿ: ಎಚ್‌.ಕೆ ಪಾಟೀಲ್

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2019, 20:19 IST
Last Updated 4 ಆಗಸ್ಟ್ 2019, 20:19 IST
   

ಬೆಂಗಳೂರು: ಕೃಷ್ಣಾ ಹಾಗೂ ಉಪನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ದೆಹಲಿ ಪ್ರವಾಸ ರದ್ದುಪಡಿಸಿ,‍ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಶಾಸಕ ಎಚ್.ಕೆ.ಪಾಟೀಲ ಆಗ್ರಹಿಸಿದ್ದಾರೆ.

ಗಂಭೀರ ‍ಪರಿಸ್ಥಿತಿ ಇದ್ದರೂ ಸಮರೋಪಾದಿಯಲ್ಲಿ ತುರ್ತು ಪರಿಹಾರ ಕಾರ್ಯಗಳು ನಡೆಯುತ್ತಿಲ್ಲ. ಆಡಳಿತ ಯಂತ್ರ ಸನ್ನದ್ಧವಾಗಿಲ್ಲ. ಎನ್‌ಡಿಆರ್‌ಎಫ್, ದೋಣಿ ರಕ್ಷಣಾ ತಂಡವನ್ನು ಮತ್ತಷ್ಟು ಸನ್ನದ್ಧ ಸ್ಥಿತಿಯಲ್ಲಿಡಬೇಕು. ಈ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ ಕೊಡಬೇಕು, ಪ್ರಧಾನಿ ಸಹ ಭೇಟಿ ನೀಡುವಂತೆ ಒತ್ತಾಯಿಸಬೇಕು ಎಂದು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಭರವಸೆ: ಪರಿಹಾರ ಕಲ್ಪಿಸಲು ಬೆಳಗಾವಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಯಾದಗಿರಿ ಜಿಲ್ಲೆಗಳ ಜಿಲ್ಲಾ ಆಡಳಿತ ಸಜ್ಜುಗೊಳಿಸಲಾಗಿದೆ. ದೆಹಲಿ ಭೇಟಿ ಸಮಯದಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆದು ನೆರವು ಕೋರಲಾಗುವುದು ಎಂದು ಎಚ್.ಕೆ.ಪಾಟೀಲ ಅವರಿಗೆ ಯಡಿಯೂರಪ್ಪ ಪತ್ರ ಬರೆದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.