ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಿಗೆ ಉತ್ತೇಜನ ನೀಡಲು ಸದ್ಯವೇ ಹೊಸ ಪ್ರವಾಸೋದ್ಯಮ (2024–29) ನೀತಿಯನ್ನು ಪ್ರಕಟಿಸಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ವಿಧಾನಸಭೆಗೆ ತಿಳಿಸಿದರು.
ಈ ನೀತಿಯಲ್ಲಿ ಧಾರ್ಮಿಕ ಪ್ರವಾಸೋದ್ಯಮ ಸೇರಿ ಎಲ್ಲ ರೀತಿಯ ಪ್ರವಾಸೋದ್ಯಮಗಳಿಗೂ ಉತ್ತೇಜನ ನೀಡಲಾಗುವುದು ಎಂದು ಅವರು ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಡಾ.ಭರತ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದರು.
ಶೈಕ್ಷಣಿಕ, ಕೃಷಿ, ಪರಿಸರ ಕ್ಷೇತ್ರಗಳ ಪ್ರವಾಸೋದ್ಯಮಕ್ಕೂ ಆದ್ಯತೆ ನೀಡಲಾಗುವುದು. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರ್ಮಿಕ ಪ್ರವಾಸೋದ್ಯಮಕ್ಕೆ ಉತ್ತಮ ವಾತಾವರಣವನ್ನು ಅಲ್ಲಿ ಜನರೇ ಸೃಷ್ಟಿಸಿದ್ದಾರೆ. ಬೆಳಗಿನ ಉಪಾಹಾರ, ಭೋಜನ, ವಾಸ್ತವ್ಯಕ್ಕೆ ವ್ಯವಸ್ಥೆಯನ್ನೂ ಮಾಡಿದ್ದಾರೆ. ಇದು ಶ್ಲಾಘನಾರ್ಹ ಎಂದು ಪಾಟೀಲ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.