ಬೆಂಗಳೂರು: ಕರ್ನಾಟಕ ಗಡಿ ಮತ್ತು ನದಿಗಳ ವಿವಾದಗಳ ವಿಷಯಗಳ ಬಗ್ಗೆ ನಿರಂತರವಾಗಿ ನಿಗಾ ವಹಿಸಿ ಅಗತ್ಯ ಕ್ರಮ ತೆಗೆದುಕೊಳ್ಳಲು ಉಸ್ತುವಾರಿಯನ್ನಾಗಿ ಕಾನೂನು ಸಚಿವ ಎಚ್.ಕೆ.ಪಾಟೀಲ ಅವರನ್ನು ನೇಮಿಸಲಾಗಿದೆ.
ಈ ವಿಷಯಗಳಿಗೆ ಸಂಬಂಧಿಸಿದಂತೆ ಕಾನೂನಾತ್ಮಕವಾಗಿ ಮತ್ತು ರಾಜಕೀಯ ನೆಲೆಗಟ್ಟಿನಲ್ಲಿ ಪರಿಶೀಲಿಸಿ, ಸಮಯೋಚಿತ ಅವಶ್ಯಕ ಕ್ರಮ ತೆಗೆದುಕೊಳ್ಳಲು ಸಚಿವರೊಬ್ಬರಿಗೆ ಜವಾಬ್ದಾರಿ ವಹಿಸಲು ಸರ್ಕಾರ ನಿರ್ಧರಿಸಿತ್ತು. ಹೀಗಾಗಿ, ಪಾಟೀಲ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.