ADVERTISEMENT

ಎಚ್ಎಂ ಎಂದರೆ ಹೋಮ್ ಮಿನಿಸ್ಟರೋ ಅಥವಾ ಹೆಲ್ತ್ ಮಿನಿಸ್ಟರೋ: ಪ್ರಿಯಾಂಕ್​​ ಖರ್ಗೆ

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2021, 7:48 IST
Last Updated 14 ನವೆಂಬರ್ 2021, 7:48 IST
ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ
ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ   

ಬೆಂಗಳೂರು: ಬಿಟ್ ಕಾಯಿನ್ ವಿಚಾರವಾಗಿ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟೀಕರಣ ನೀಡಿರುವ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ನಡೆಯನ್ನು ಕಾಂಗ್ರೆಸ್‌ ಶಾಸಕ ಪ್ರಿಯಾಂಕ್​​ ಖರ್ಗೆ ಖಂಡಿಸಿದ್ದಾರೆ.

ಟ್ವೀಟ್‌ ಮಾಡಿರುವ ಅವರು, ‘ಎಚ್ಎಂ ಅಂದರೆ ಹೋಮ್ ಮಿನಿಸ್ಟರ್ ಅನ್ನಬೇಕೋ, ಹೆಲ್ತ್ ಮಿನಿಸ್ಟರ್ ಅನ್ನಬೇಕೋ? ಗೃಹ ಸಚಿವಾಲಯಕ್ಕೆ‌ ಸಂಬಂಧಿಸಿದ ಬಿಟ್ ಕಾಯಿನ್ ಹಗರಣದ ಬಗ್ಗೆ ಆರೋಗ್ಯ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿರುವುದೇಕೆ? ನಾಳೆ ಗೃಹ ಸಚಿವರು ಬಂದು ರಾಜ್ಯದ ಕೊರೊನಾ ಲಸಿಕೆಯ ಮಾಹಿತಿ ನೀಡ್ತಾರಾ?‘ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

ಸದಾಶಿವನಗರ ತಮ್ಮ ನಿವಾಸದಲ್ಲಿ ಶನಿವಾರ ರಾತ್ರಿ 9 ಗಂಟೆಗೆ ಸುದ್ದಿಗೋಷ್ಠಿ ನಡೆಸಿದ್ದ ಸುಧಾಕರ್, ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿರುವ ಬಿಟ್​​ ಕಾಯಿನ್​​ ವಿಚಾರವಾಗಿ ಮಾಹಿತಿ ನೀಡಿದ್ದರು. ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರು ಮಾಡುತ್ತಿರುವ ಆರೋಪಕ್ಕೆ ಸ್ಪಷ್ಟೀಕರಣ ನೀಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.