ಬೆಂಗಳೂರು: ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳನ್ನು ಹೊರತುಪಡಿಸಿ ಇತರ ಎಲ್ಲ ಸರ್ಕಾರಿ ಇಲಾಖೆಗಳ ನೌಕರರು, ನಿಗಮ, ಮಂಡಳಿಗಳ ಬಿ,ಸಿ ಮತ್ತು ಡಿ ವರ್ಗದ ಅಧಿಕಾರಿಗಳು ಹಾಗೂ ನೌಕರರರಿಗೆ ಇದೇ 14ರವರೆಗೆ ರಜೆ ನೀಡಲಾಗಿದೆ.
ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ ಇಲಾಖೆಗಳಲ್ಲಿನ ದೃಷ್ಟಿದೋಷ ಹೊಂದಿದವರು ಮತ್ತು ಇತರ ದೈಹಿಕ ಅಂಗವೈಕಲ್ಯ ಹೊಂದಿರುವ ಅಧಿಕಾರಿ ಮತ್ತು ನೌಕರರಿಗೆ ಸಹ 14ರವರೆಗೆ ರಜೆ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.