ADVERTISEMENT

ರಸ್ತೆ, ಪಾದಚಾರಿ ಮಾರ್ಗದಲ್ಲಿ ವಾಹನ ನಿಲ್ಲಿಸಿದರೆ ದಂಡ

​ಪ್ರಜಾವಾಣಿ ವಾರ್ತೆ
Published 16 ಜೂನ್ 2021, 5:26 IST
Last Updated 16 ಜೂನ್ 2021, 5:26 IST

ಬೆಂಗಳೂರು: ರಸ್ತೆ ಮತ್ತು ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರ ವಿರುದ್ಧ ಮೋಟಾರು ವಾಹನ ಕಾಯ್ದೆ, ಮೋಟಾರು ವಾಹನ ನಿಯಮ ಮತ್ತು ಕರ್ನಾಟಕ ಪೊಲೀಸ್‌ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ, ದಂಡ ವಿಧಿಸುವಂತೆ ಗೃಹ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

ಪಾದಚಾರಿ ಮಾರ್ಗಗಳಲ್ಲಿ ವಾಹನ ನಿಲುಗಡೆ ಮಾಡುವವರಿಗೆ ₹ 500ರಿಂದ ₹ 1,000ದವರೆಗೆ ದಂಡ ವಿಧಿಸಬೇಕು. ರಸ್ತೆಯಲ್ಲಿ ವಾಹನ ನಿಲುಗಡೆ ಮಾಡಿ ಸಂಚಾರಕ್ಕೆ ಅಡ್ಡಿಪಡಿಸುವವರಿಗೆ ಪ್ರತಿ ಗಂಟೆಗೆ ₹ 50ರಂತೆ ದಂಡ ವಿಧಿಸಬೇಕು ಎಂದು ಎಲ್ಲ ಪೊಲೀಸ್‌ ಕಮಿಷನರ್‌ಗಳು, ಎಸ್‌ಪಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ನಿರ್ದೇಶನ ನೀಡಲಾಗಿದೆ.

ಪಾದಚಾರಿ ಮಾರ್ಗಗಳ ಅತಿಕ್ರಮಣ ಪ್ರಶ್ನಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್‌ ನೀಡಿರುವ ಆದೇಶದ ಅನುಸಾರ ಈ ಸುತ್ತೋಲೆ ಹೊರಡಿಸಲಾಗಿದೆ. ಪಾದಚಾರಿ ಮಾರ್ಗಗಳ ಮೇಲೆ ವಾಹನ ನಿಲುಗಡೆ ಮಾಡುವವರು, ರಸ್ತೆ ವಾಹನ ನಿಲ್ಲಿಸುವವರು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಅಪಾಯಕಾರಿ ರೀತಿಯಲ್ಲಿ ವಾಹನ ನಿಲುಗಡೆ ಮಾಡಿ, ಹೋಗುವವರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.