ADVERTISEMENT

ಕೋವಿಡ್‌ ನಿರ್ವಹಣೆಗಾಗಿ ಗೃಹ ರಕ್ಷಕ ದಳ ಬಳಕೆ: ಬಸವರಾಜ ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2021, 21:42 IST
Last Updated 29 ಏಪ್ರಿಲ್ 2021, 21:42 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಬೆಂಗಳೂರು: ಕೋವಿಡ್‌ ನಿರ್ವಹಣೆಗಾಗಿ 8,500 ಮಂದಿ ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮುಖ್ಯಮಂತ್ರಿಯವರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆ ವಿಡಿಯೊ ಸಂವಾದದ ಬಳಿಕ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಬೆಂಗಳೂರು ನಗರದಲ್ಲಿ 15,000 ಮಂದಿ ಸಿವಿಲ್‌ ಡಿಫೆನ್ಸ್‌ ತರಬೇತಿ ಪಡೆದವರು ಇದ್ದಾರೆ. ಅವರನ್ನು ಪ್ರತಿ ವಾರ್ಡ್‌ನಲ್ಲಿ ಸೋಂಕಿತರನ್ನು ಪತ್ತೆ ಹಚ್ಚಲು ಮತ್ತು ಪ್ರತ್ಯೇಕಿಸುವ ಕೆಲಸಕ್ಕೆ ಬಳಸಲಾಗುವುದು. ಬೆಂಗಳೂರು ನಗರದ ಶುಚಿತ್ವ ಕಾಪಾಡಲು ಅಗ್ನಿಶಾಮಕ ಸಿಬ್ಬಂದಿಗೆ ಸೂಚಿಸಲಾಗಿದೆ ಎಂದು ಬೊಮ್ಮಾಯಿ ತಿಳಿಸಿದರು.

ADVERTISEMENT

ರಾಜ್ಯದ ಎಲ್ಲ ಕಾರಾಗೃಹಗಳನ್ನು ಸ್ಯಾನಿಟೈಸ್‌ ಮಾಡುವಂತೆ ಸೂಚಿಸಲಾಗಿದೆ. ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ರಾಜ್ಯದ ಎಲ್ಲ ಕಾರಾಗೃಹಗಳಲ್ಲಿನ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸುವುದಾಗಿ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.