ADVERTISEMENT

‘ತಾಂಬೂಲ ಪ್ರಶ್ನೆ’ ಜನರ ನಂಬಿಕೆ ಅಲ್ಲಗೆಳೆಯಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 26 ಮೇ 2022, 14:57 IST
Last Updated 26 ಮೇ 2022, 14:57 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ತುಮಕೂರು: ‘ದಕ್ಷಿಣ ‌ಕನ್ನಡ ಜಿಲ್ಲೆಯ ತೆಂಕ ಉಳಿಪಾಡಿ ಮಳಲಿ ಪೇಟೆಯ ಜುಮ್ಮಾ ಮಸೀದಿ ಸಂಬಂಧ ‘ತಾಂಬೂಲ ಪ್ರಶ್ನೆ’ ಕೇಳಿರುವುದನ್ನು ನಾನು ಅಲ್ಲಗೆಳೆಯುವುದಿಲ್ಲ. ಅದು ಆ ಭಾಗದ ಜನರ ನಂಬಿಕೆ’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ತಾಲ್ಲೂಕಿನ ಹರಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾನೂನು ಸುವ್ಯವಸ್ಥೆ ಕಾಪಾಡಲು ಮಂಗಳೂರು ಪೊಲೀಸರು ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದ್ದಾರೆ. ತಾಂಬೂಲ ಪ್ರಶ್ನೆಯನ್ನು ನಾವು ಪ್ರಶ್ನಿಸುವುದಿಲ್ಲ. ಅದು ಅವರ ವೈಯಕ್ತಿಕ ವಿಚಾರ’ ಎಂದು ಸ್ಪಷ್ಟಪಡಿಸಿದರು.

ಎಡಿಜಿಪಿ ಅಲೋಕ್‌ಕುಮಾರ್ ಮಂಗಳೂರಿಗೆ
ಗೃಹ ಸಚಿವ ಆರಗ ಜ್ಞಾನೇಂದ್ರ ಸೂಚನೆ ಮೇರೆಗೆ ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್‌ಕುಮಾರ್ ಬುಧವಾರ ನಗರಕ್ಕೆ ಬಂದಿದ್ದು, ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಹರಿರಾಂ ಶಂಕರ್ ಜತೆ ಚರ್ಚಿಸಿದರು. ಎಡಿಜಿಪಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ ಇದು ಅವರ ಮೊದಲ ಭೇಟಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.