ADVERTISEMENT

ಕಾಂಗ್ರೆಸ್ ಮುಖಂಡರ ಮಕ್ಕಳಿಗೆ ಡ್ರಗ್ಸ್ ಕೊಡಿಸುತ್ತಿದ್ದ ಶ್ರೀಕಿ: ಗೃಹ ಸಚಿವ ಆರೋಪ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2021, 6:53 IST
Last Updated 20 ನವೆಂಬರ್ 2021, 6:53 IST
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ   

ಕಲಬುರಗಿ: ಬಿಟ್ ಕಾಯಿನ್ ಪ್ರಕರಣದಲ್ಲಿ ಸಿಲುಕಿಕೊಂಡಿರುವ ಶ್ರೀಕಿ ಅಲಿಯಾಸ್ ಶ್ರೀಕೃಷ್ಣ ಕಾಂಗ್ರೆಸ್ ಮುಖಂಡರ ಮಕ್ಕಳಿಗೆ ಡ್ರಗ್ಸ್ ತರಿಸಿಕೊಡುತ್ತಿದ್ದು. ಗೋವಾದಲ್ಲಿ ಕಾಂಗ್ರೆಸ್ ಮುಖಂಡರ ಜೊತೆಗೆ ಕಾಣಿಸಿಕೊಂಡಿದ್ದ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಆರೋಪಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಕಿಯನ್ನು ಹಿಡಿದು ತನಿಖೆ ಮಾಡುತ್ತಿರುವುದೇ ತಪ್ಪು ಎನ್ನುವ ಹಾಗೆ ಕಾಂಗ್ರೆಸ್ ಮುಖಂಡರು ಮಾತನಾಡುತ್ತಿದ್ದಾರೆ.ತನಿಖೆ ಅತ್ಯಂತ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಸಮರ್ಥಿಸಿಕೊಂಡರು.

ಮುಖ್ಯಮಂತ್ರಿ ತಲೆದಂಡ ಆಗುತ್ತದೆ ಎಂಬ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿಕೆ ಕುರಿತು ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಏನು ಬೇಕಾದರೂ ಹೇಳುತ್ತಾರೆ. ಪ್ರಿಯಾಂಕ್ ಪಾಂಡಿತ್ಯ ಪ್ರದರ್ಶನ ಮಾಡುತ್ತಿದ್ದಾರೆ. ನೀವು ಐಟಿ ಬಿಟಿ ಸಚಿವರಿದ್ದಾಗ ಯಾಕೆ ಹಿಡಿಯಲಿಲ್ಲ. ಅವನು ಹ್ಯಾಕರ್ ಅಂತಾ ನಿಮಗೆ ಗೊತ್ತಾಗಲಿಲ್ಲವಾ? ಕಾಂಗ್ರೆಸ್ ಸರ್ಕಾರದಲ್ಲಿ ಸಿ.ಎಂ, ಗೃಹ ಸಚಿವರು, ಐಟಿ, ಬಿಟಿ ಸಚಿವರಿಗೆ ಈ ಬಗ್ಗೆ ಮಾಹಿತಿ ಇದ್ದರೂ ಯಾಕೆ ಹಿಡಿಯಲಿಲ್ಲ ಎಂದು ಪ್ರಶ್ನಿಸಿದರು.

ADVERTISEMENT

ಬಸವರಾಜ ಬೊಮ್ಮಾಯಿ‌ ಸರ್ಕಾರದಲ್ಲಿ ಕಾಂಗ್ರೆಸ್‌ನವರು ನಿರುದ್ಯೋಗಿಗಳಾಗಿದ್ದಾರೆ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.