ADVERTISEMENT

ಕೋವಿಡ್‌ ನಿರ್ಬಂಧ ಉಲ್ಲಂಘಿಸಿದರೆ ಕಾನೂನು ಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 6 ಜನವರಿ 2022, 19:17 IST
Last Updated 6 ಜನವರಿ 2022, 19:17 IST
ಅರಗ ಜ್ಞಾನೇಂದ್ರ
ಅರಗ ಜ್ಞಾನೇಂದ್ರ   

ಬೆಂಗಳೂರು: ‘ಕೋವಿಡ್ ನಿರ್ಬಂಧ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುವುದು’ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಎಚ್ಚರಿಕೆ ನೀಡಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋವಿಡ್‌ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು. ಉದ್ದೇಶಿತ ಪಾದಯಾತ್ರೆ ಬಗ್ಗೆ ಕಾಂಗ್ರೆಸ್ ನಾಯಕರು ಮರು ಆಲೋಚಿಸಿ, ಮುಂದೂಡಬೇಕು’ ಎಂದು ಸಲಹೆ ನೀಡಿದರು.

‘ರಾಜ್ಯದಲ್ಲಿ, ವಿಶೇಷವಾಗಿ ಬೆಂಗಳೂರು ನಗರದಲ್ಲಿ ಕೋವಿಡ್‌ ಪ್ರಕರಣಗಳು ಉಲ್ಬಣಗೊಳ್ಳುತ್ತಿವೆ. ಅದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾಂಗ್ರೆಸ್‌ ನಾಯಕರು ಸರ್ಕಾರದ ಕಾಳಜಿಯನ್ನು ಅರ್ಥಮಾಡಿಕೊಳ್ಳಬೇಕು’ ಎಂದು ಕೋರಿದರು.

ADVERTISEMENT

ಕೋವಿಡ್‌ ಹೆಚ್ಚುತ್ತಿದೆ ಎಂದು ಬಿಜೆಪಿ ನಗರದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮವನ್ನು ಮುಂದೂಡಿದೆ. ಕಾಂಗ್ರೆಸ್ ಪಕ್ಷವೂ ತನ್ನ ಕಾರ್ಯಕ್ರಮವನ್ನು ಮುಂದೂಡಲಿ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.