ADVERTISEMENT

ಪಾದರಾಯನಪುರ ಪ್ರಕರಣ: ಸುಗ್ರೀವಾಜ್ಞೆ ಬಳಿಕ ಆರೋಪಿಗಳ ಮೇಲೆ ಮತ್ತೆ ಸೆಕ್ಷನ್‌

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2020, 12:22 IST
Last Updated 23 ಏಪ್ರಿಲ್ 2020, 12:22 IST
ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ   

ಉಡುಪಿ: ಪಾದರಾಯನಪುರ ಗಲಾಟೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಇನ್ನೂ ಚಾರ್ಜ್‌ಶೀಟ್‌ ಹಾಕಿಲ್ಲ. ಕೇಂದ್ರ ಸರ್ಕಾರ ಸಾಂಕ್ರಮಿಕ ರೋಗಗಳ ಕಾಯ್ದೆಗೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಿದ್ದು, ಕಾಯ್ದೆ ಜಾರಿಯಾದ ಬಳಿಕ ಅದರೊಳಗಿರುವ ಕೆಲವು ಸೆಕ್ಷನ್‌ಗಳನ್ನು ಆರೋಪಿಗಳ ಮೇಲೆ ಹಾಕುವ ಚಿಂತನೆ ಇದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿ, ಪ್ರಕರಣ ಸಂಬಂಧ 124ಕ್ಕೂ ಹೆಚ್ಚು ಆರೋಪಿಗಳನ್ನು ಬಂಧಿಸಿ ರಾಮನಗರ ಜೈಲಿಗೆ ಹಾಕಲಾಗಿದೆ. ಪ್ರಮುಖ ಆರೋಪಿಯನ್ನು ಶೀಘ್ರ ಬಂಧಿಸಲಾಗುವುದು. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆಯಡಿ ಆರೋಪಿಗಳ ಮೇಲೆ 8 ರಿಂದ 10 ಸೆಕ್ಷನ್‌ಗಳನ್ನು ಹಾಕಲಾಗಿದೆ. ಸುಗ್ರೀವಾಜ್ಞೆ ಅನುಷ್ಠಾನಗೊಂಡ ಬಳಿಕ ಹೆಚ್ಚಿನ ಸೆಕ್ಷನ್‌ಗಳನ್ನು ಹಾಕಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT