ಬೆಂಗಳೂರು: ‘ಧಾರಾವಾಹಿ ರೀತಿಯಲ್ಲಿ ಆಡಿಯೊ, ವಿಡಿಯೊ ಬರುತ್ತಿದೆ. ಯುವತಿ ವಿಡಿಯೊ ಬಿಡುಗಡೆ ಮಾಡಿದ್ದಾಳೆ ಎಂದು ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಪ್ರಕರಣದ ತನಿಖೆಯನ್ನು ನಿಷ್ಠುರವಾಗಿ, ನ್ಯಾಯಸಮ್ಮತವಾಗಿ ಮಾಡುತ್ತೇವೆ. ಯಾರ ಪರ, ಯಾರ ವಿರುದ್ಧ ತನಿಖೆ ಮಾಡುವುದಿಲ್ಲ. ನಿಜವಾದ ತಪ್ಪಿತಸ್ಥರಿಗೆ ಶಿಕ್ಷೆ ಆಗಲಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರದ್ದು ಎನ್ನಲಾದ ಸಿ.ಡಿ ಪ್ರಕರಣದಲ್ಲಿ ಸಿ.ಡಿ, ಆಡಿಯೊ, ವಿಡಿಯೊ ಇಟ್ಟುಕೊಂಡು ಎಸ್ಐಟಿ ಕೂಲಂಕಷವಾಗಿ ತನಿಖೆ ಮಾಡಲಿದೆ. ವೈಜ್ಞಾನಿಕವಾಗಿ ಪರಿಶೀಲನೆ ಮಾಡಲಾಗುತ್ತದೆ’ ಎಂದು ಹೇಳಿದರು.
‘ಯಾವುದೇ ರೀತಿಯ ಒತ್ತಡ, ಪ್ರಭಾವ ಅಥವಾ ದಾರಿ ತಪ್ಪಿಸುವುದು ನಡೆಯುವುದಿಲ್ಲ. ಎಸ್ಐಟಿ ಕ್ರಮಬದ್ಧವಾಗಿ, ಕಾನೂನುಬದ್ಧವಾಗಿ ತನಿಖೆ ಮಾಡಲಿದೆ’ ಎಂದರು.
ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.