ADVERTISEMENT

ಪುಟಾಣಿಗಳಿಗೆ ತಪ್ಪಿದ ಹೋಂವರ್ಕ್‌

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 18:44 IST
Last Updated 1 ಜೂನ್ 2019, 18:44 IST
   

ಬೆಂಗಳೂರು: ಇನ್ನು ಮುಂದೆ 1 ಮತ್ತು 2ನೇ ತರಗತಿ ಮಕ್ಕಳು ಹೋಂವರ್ಕ್‌ ಮಾಡುವ ಕಿರಿಕಿರಿಯಿಂದ ಪಾರಾಗಲಿದ್ದಾರೆ.

ಈ ತರಗತಿಗಳಲ್ಲಿ ಓದುವ ಮಕ್ಕಳಿಗೆ ಹೋಂವರ್ಕ್‌ ಕೊಡಬಾರದು ಎಂದು ಸರ್ಕಾರ ಸ್ಪಷ್ಟ ನಿರ್ದೇಶನ ನೀಡಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, 1ರಿಂದ 5ನೇ ತರಗತಿವರೆಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿದ ಪಠ್ಯಕ್ರಮ ಬಿಟ್ಟು ಇನ್ಯಾವುದೇ ಪಠ್ಯಕ್ರಮ ನಿಗದಿಪಡಿಸಿ ಬೋಧಿಸಿದರೆ ಅಂತಹ ಶಾಲೆಗಳ ಮಾನ್ಯತೆ ರದ್ದುಪಡಿಸಲಾಗುವುದು ಎಂದೂ ಎಚ್ಚರಿಕೆ ನೀಡಿದೆ.

ADVERTISEMENT

1 ಮತ್ತು 2ನೇ ತರಗತಿ ಮಕ್ಕಳಿಗೆ ಎನ್‌ಸಿಇಆರ್‌ಟಿ ನಿಗದಿಪಡಿಸಿದ ಭಾಷೆ ಮತ್ತು ಗಣಿತ, 3ರಿಂದ 5ನೇ ತರಗತಿ ಮಕ್ಕಳಿಗೆ ಭಾಷೆ, ಪರಿಸರ ವಿಜ್ಞಾನ, ಗಣಿತ ಬಿಟ್ಟು ಇನ್ಯಾವುದೇ ಪಠ್ಯಕ್ರಮ ನಿಗದಿಪಡಿಸಕೂಡದು ಎಂದೂ ತಿಳಿಸಲಾಗಿದೆ.

ಎನ್‌ಸಿಇಆರ್‌ಟಿ ಪಠ್ಯಕ್ರಮದ ಬದಲು ಇತರ ಪಠ್ಯಕ್ರಮ ಅಳವಡಿಸಿ ಬೋಧಿಸುವ ಶಾಲೆಗಳ ಬಗ್ಗೆ ನಿಗಾ ವಹಿಸಲು ಮತ್ತು ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸಲು ವಿಶೇಷ ತಂಡ ರಚಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.