ADVERTISEMENT

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಎಸ್. ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2020, 2:07 IST
Last Updated 23 ಮಾರ್ಚ್ 2020, 2:07 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಸೋಮವಾರ ನಡೆಯಬೇಕಿದ್ದ ದ್ವಿತೀಯ ಪರೀಕ್ಷೆಯನ್ನು ಮುಂದೂಡಿ ಸಚಿವ ಎಸ್. ಸುರೇಶ್ ಕುಮಾರ್ ಆದೇಶಿಸಿದ್ದಾರೆ.

ಈ ಕುರಿತು ಫೇಸ್‌ಬುಕ್‌ನಲ್ಲಿ ಸ್ಪಷ್ಟನೆ ನೀಡಿರುವ ಸಚಿವರು, ಕೊನೆಯ ಪರೀಕ್ಷೆಯನ್ನು ನಡೆಸುವಂತೆ ಈಗಾಗಲೇ ನಾವು ನಿರ್ಧರಿಸಿದ್ದೆವು. ಆದರೆ ಒಂಬತ್ತು ಜಿಲ್ಲೆಗಳಲ್ಲಿ ಲಾಕ್‌ಡೌನ್ ಮಾಡುವ ಹಿನ್ನೆಲೆಯಲ್ಲಿ ಪಿಯುಸಿ ಮಕ್ಕಳಿಗೆ ಪ್ರತ್ಯೇಕಸಾರಿಗೆ ವ್ಯವಸ್ಥೆ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ಕುರಿತು ಸಾಧಕ ಬಾಧಕಗಳ ಕುರಿತು ಚರ್ಚಿಸಿ ಪರೀಕ್ಷೆಯನ್ನು ಮುಂದೂಡುವಂತೆ ತೀರ್ಮಾನಿಸಲಾಗಿದೆ.

ಸೋಮವಾರ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಕೊನೆಯ ಪರೀಕ್ಷೆಯನ್ನು ಮುಂದೂಡಲಾಗುತ್ತಿದೆ. ಏಪ್ರಿಲ್ 1 ರ ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಮೇಲೆ ಚರ್ಚಿಸಿ ಯಾವ ದಿನಾಂಕದಂದುಪರೀಕ್ಷೆ ನಡೆಯಬೇಕು ಎಂಬುದನ್ನು ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ಪ್ರಧಾನ ಕಾರ್ಯದರ್ಶಿ, ಪಿಯುಸಿ ನಿರ್ದೇಶಕರು ಸೇರಿದಂತೆ ಎಲ್ಲರೂ ಚರ್ಚಿಸಿದ್ದೇವೆ.ಗಡಿ ಜಿಲ್ಲೆಗಳಾದ ಕಾಸರಗೋಡಿನಿಂದ ಮಂಗಳೂರಿಗೆ, ಕೇರಳದಿಂದ ಮೈಸೂರಿಗೆ,ಕೇರಳದಿಂದ ಚಾಮರಾಜನಗರಕ್ಕೆ, ಕೋಲಾರಕ್ಕೆ ಆಂಧ್ರದಿಂದ, ಕಲಬುರ್ಗಿ ಮತ್ತು ಬೀದರ್‌ಗೆ ಆಂಧ್ರ ಮತ್ತು ಮಹಾರಾಷ್ಟ್ರದಿಂದ ಮಕ್ಕಳು ಬರುತ್ತಿದ್ದಾರೆ.ಯಾವುದೇ ಮಗು ಪರೀಕ್ಷೆಯಿಂದ ವಂಚಿತ ಮತ್ತುತೊಂದರೆಗೀಡಾಗುವುದು ಬೇಡವೆಂದು ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.