ರಾಜಭವನದಲ್ಲಿ ಮಂಗಳವಾರ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟಾರೇಟ್ ಪ್ರದಾನ ಮಾಡಿದರು. ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ ಇದ್ದಾರೆ–
ಪ್ರಜಾವಾಣಿ ಚಿತ್ರ.
ಬೆಂಗಳೂರು: ನೀರಿನ ಮೂಲಗಳು, ನದಿಗಳ ರಕ್ಷಣೆಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದು ರಾಜ್ಯಪಾಲ ಥಾವರಚಂದ್ ಗೆಹಲೋತ್ ಹೇಳಿದರು.
ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮಂಗಳವಾರ ರಾಜಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೈಸೂರಿನ ಅವಧೂತ ದತ್ತಪೀಠದ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಅವರು ಮಾತನಾಡಿದರು.
ಸ್ವಾಮೀಜಿ ದೇಶ, ವಿದೇಶಗಳಲ್ಲಿ ಆಶ್ರಮ ಸ್ಥಾಪಿಸಿದ್ದಾರೆ. ಚಿಕಿತ್ಸಕ ಮತ್ತು ಧ್ಯಾನ ಸಂಗೀತದ ಜತೆಗೆ ಪ್ರಾಚೀನ ವೈದಿಕ ಸಂಪ್ರದಾಯ ಉತ್ತೇಜಿಸುವ ಕೆಲಸ ಮಾಡುತ್ತಿದ್ದಾರೆ. ಪೂರ್ವಜರು ನೀಡಿದ ಹಾಡು, ಸಂಗೀತ, ಕಂಠದ ಶಕ್ತಿಯನ್ನು ಜನರ ಆರೋಗ್ಯಕ್ಕೆ ಹೇಗೆ ಬಳಸಿಕೊಳ್ಳಬೇಕು ಎಂಬ ಕುರಿತು ಪರಿಣಾಮಕಾರಿ ಆವಿಷ್ಕಾರಗಳನ್ನು ಮಾಡಿದ್ದಾರೆ. ಅವರ ಸಾಧನೆ ಗುರುತಿಸಿ ಹಲವು ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಿವೆ ಎಂದು ಶ್ಲಾಘಿಸಿದರು.
ವಿಶ್ವವಿದ್ಯಾಲಯದ ಕುಲಪತಿ ನಾಗೇಶ್ ವಿ.ಬೆಟ್ಟಕೋಟೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.