ADVERTISEMENT

ಟಿಟಿಐ ಮುಚ್ಚಿದರೆ ಹೋರಾಟ: ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 4 ಮೇ 2019, 20:15 IST
Last Updated 4 ಮೇ 2019, 20:15 IST
ಬಸವರಾಜ ಹೊರಟ್ಟಿ
ಬಸವರಾಜ ಹೊರಟ್ಟಿ   

ಧಾರವಾಡ: ‘ಶಿಕ್ಷಕರ ತರಬೇತಿ ಕೇಂದ್ರಗಳನ್ನು ಸರ್ಕಾರ ಮುಚ್ಚಲು ಮುಂದಾದರೆ, ಶಿಕ್ಷಣ ಪ್ರೇಮಿಗಳ ಜತೆ ಸೇರಿ ಉಗ್ರ ಹೋರಾಟ ನಡೆಸಲಾಗುವುದು’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಎಚ್ಚರಿಸಿದರು.

ಈ ಕುರಿತು ‘ಪ್ರಜಾವಾಣಿ’ಯಲ್ಲಿ ಶನಿವಾರ ಬಂದಿರುವ ವಿಶೇಷ ವರದಿಗೆ ಪ್ರತಿಕ್ರಿಯಿಸಿದ ಅವರು ‘132 ವರ್ಷಗಳ ಇತಿಹಾಸ ಇರುವ ಧಾರವಾಡದ ಶಿಕ್ಷಕಿಯರ ತರಬೇತಿ ಕೇಂದ್ರ ಈ ಭಾಗದ ಹೆಮ್ಮೆ. ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ ಎಂಬ ಕಾರಣವನ್ನು ನೀಡದೆ,
ಕೇಂದ್ರದತ್ತ ವಿದ್ಯಾರ್ಥಿಗಳನ್ನು ಸೆಳೆಯುವ ಕೆಲಸ ಆಗಬೇಕು. ಈ ವಿಷಯದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಶೀಘ್ರ ಭೇಟಿಯಾಗಿ ಮಾತನಾಡುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT