ADVERTISEMENT

ಹೊಸಕೋಟೆ ನಗರಸಭೆ ಚುನಾವಣೆ: ಬಿಜೆಪಿ ಮೇಲುಗೈ, 7 ಮಂದಿ ಶರತ್‌ ಬೆಂಬಲಿಗರಿಗೆ ಜಯ

​ಪ್ರಜಾವಾಣಿ ವಾರ್ತೆ
Published 11 ಫೆಬ್ರುವರಿ 2020, 4:30 IST
Last Updated 11 ಫೆಬ್ರುವರಿ 2020, 4:30 IST
   

ಹೊಸಕೋಟೆ (ಬೆಂಗಳೂರು ಗ್ರಾಮಾಂತರ): ಹೊಸಕೋಟೆ ನಗರಸಭೆಯ 31 ವಾರ್ಡ್‌ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಬಹುತೇಕ ಪ್ರಕಟವಾಗಿದ್ದು, ಬಿಜೆಪಿ ಅಭ್ಯರ್ಥಿಗಳು ಮೇಲುಗೈ ಸಾಧಿಸಿದ್ದಾರೆ.

ನಗರಸಭೆಯ31 ವಾರ್ಡ್‌ಗಳ ಪೈಕಿ 27 ವಾರ್ಡ್‌ಗಳ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 22 ವಾರ್ಡ್‌ಗಳಲ್ಲಿ ಗೆದ್ದಿದೆ. ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಅವರ 7 ಮಂದಿ ಬೆಂಬಲಿಗರೂ ನಗರಸಭೆಯಲ್ಲಿ ಗೆಲುವು ಸಾಧಿಸಿದ್ದಾರೆ. ಇನ್ನುಳಿದಂತೆ ಎಸ್‌ಡಿಪಿಐ ಒಂದು,ಪಕ್ಷೇತರ ಅಭ್ಯರ್ಥಿಯೊಬ್ಬರು ಜಯ ಸಾಧಿಸಿದ್ದಾರೆ.ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಿದೆ.

ಇನ್ನು ನಾಲ್ಕು ವಾರ್ಡ್‌ಗಳ ಫಲಿತಾಂಶ ಬಾಕಿ ಉಳಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.