ADVERTISEMENT

ಸತೀಶ ಕುಲಕರ್ಣಿಗೆ ‘ಡಾ. ಶಿಮುಶ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2018, 17:53 IST
Last Updated 17 ನವೆಂಬರ್ 2018, 17:53 IST
ಸತೀಶ ಕುಲಕರ್ಣಿ
ಸತೀಶ ಕುಲಕರ್ಣಿ   

ಹಾವೇರಿ: ಇಲ್ಲಿನ ಹೊಸಮಠದಿಂದ ಕೊಡ ಮಾಡುವ ‘ಡಾ.ಶಿಮುಶ ಪ್ರಶಸ್ತಿ’ಗೆ ಹಿರಿಯ ಸಾಹಿತಿ, ಹಾವೇರಿಯ ಸತೀಶ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯು ₹50 ಸಾವಿರ ನಗದು, ಫಲಕ, ಪ್ರಮಾಣ ಪತ್ರವನ್ನು ಒಳಗೊಂಡಿದೆ.

ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನ.30ರಿಂದ ಮಠದಲ್ಲಿ ‘ಶರಣ ಸಂಸ್ಕೃತಿ ಉತ್ಸವ’ವು ನಡೆಯಲಿದ್ದು, ಡಿ.2ರ ಸಮಾರೋಪ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಮಠದ ಬಸವಶಾಂತಲಿಂಗ ಸ್ವಾಮೀಜಿ ಶನಿವಾರ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.