ADVERTISEMENT

ಜಂಬೋ ಸಿಲಿಂಡರ್ ಕೊಡಿ: ಫಾನಾ

​ಪ್ರಜಾವಾಣಿ ವಾರ್ತೆ
Published 6 ಮೇ 2021, 20:30 IST
Last Updated 6 ಮೇ 2021, 20:30 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆ ಏರಿಕೆ ಕಾಣುತ್ತಿದ್ದಂತೆ ವೈದ್ಯಕೀಯ ಆಮ್ಲಜನಕಕ್ಕೆ ಖಾಸಗಿ ಆಸ್ಪತ್ರೆಗಳಿಂದ ಬೇಡಿಕೆ ಹೆಚ್ಚುತ್ತಿದ್ದು, ಸಿಲಿಂಡರ್‌ಗಳನ್ನು ಒದಗಿಸುವಂತೆ ಆಸ್ಪತ್ರೆಗಳ ಮುಖ್ಯಸ್ಥರು ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾರಂಭಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಸ್ ಅಸೋಸಿಯೇಷನ್ (ಫಾನಾ) ಮತ್ತೊಮ್ಮೆ ಆಮ್ಲಜನಕದ ಕೊರತೆ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದು, ಸಿಲಿಂಡರ್‌ಗಳ ಲಭ್ಯತೆಗೆ ಅಗತ್ಯ ವ್ಯವಸ್ಥೆ ಮಾಡಲು ಕೋರಿದೆ.

‘ಆಸ್ಪತ್ರೆಗಳು ಮೂರು ದಿನಗಳಿಗೆ ಆಗುವಷ್ಟು ಆಮ್ಲಜನಕದ ದಾಸ್ತಾನು ಹೊಂದಿರಬೇಕು’ ಎಂಬ ಸರ್ಕಾರದ ಆದೇಶಕ್ಕೆ ಫಾನಾ ಆಕ್ಷೇಪ ವ್ಯಕ್ತಪಡಿಸಿದೆ.

ADVERTISEMENT

‘ಮೇ 3ರಂದು ಹೊರಡಿಸಿದ ಆದೇಶದ ಪ್ರಕಾರ ಪ್ರತಿ ಹಾಸಿಗೆಗೆ 7 ಜಂಬೋ ಸಿಲಿಂಡರ್‌ಗಳು ಅಗತ್ಯವಿದೆ. ಆದರೆ, ಅದೇ ಆದೇಶದಲ್ಲಿ ಇನ್ನೊಂದೆಡೆ ಪ್ರತಿ ಹಾಸಿಗೆಗೆ 4 ಜಂಬೋ ಸಿಲಿಂಡರ್‌ಗಳು ಹೊಂದಿರಬೇಕು ಎಂದು ಹೇಳಲಾಗಿದೆ. ಇದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ’ ಎಂದು ಅಸೋಸಿಯೇಷನ್ ಅಧ್ಯಕ್ಷ ಡಾ. ಪ್ರಸನ್ನ ಎಚ್‌.ಎಂ. ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.