ADVERTISEMENT

ಹಾಸ್ಟೆಲ್‌ ಸಮೀಕ್ಷೆಗೆ ಆದೇಶ

​ಪ್ರಜಾವಾಣಿ ವಾರ್ತೆ
Published 31 ಅಕ್ಟೋಬರ್ 2019, 3:51 IST
Last Updated 31 ಅಕ್ಟೋಬರ್ 2019, 3:51 IST
   

ಬೆಂಗಳೂರು: ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನಿರ್ವಹಣೆಯಲ್ಲಿರುವ ಬಿಸಿಎಂ ಹಾಸ್ಟೆಲ್‍ಗಳಲ್ಲಿ ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಮೂಲಸೌಕರ್ಯ ಹಾಗೂ ಸುರಕ್ಷಾಕ್ರಮ ಗಳ ಬಗ್ಗೆ ಸಮೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್‌ ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯ ಪೀಠ ಬುಧವಾರ ವಿಚಾರಣೆ ನಡೆಸಿತು.

‘ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿ ನೇತೃತ್ವದಲ್ಲಿ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾ ಮಟ್ಟದ ಸಮಿತಿ ರಚಿಸಬೇಕು. ಈ ಸಮಿತಿಗಳು ಎಲ್ಲ ಹಾಸ್ಟೆಲ್‍ಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಬೇಕು’ ಎಂದು ನ್ಯಾಯಪೀಠ ನಿರ್ದೇಶಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.