ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ಮಾ. 31ರವರೆಗೆ ಬಂದ್ ಮಾಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಆದರೆ, ಸಣ್ಣ ದರ್ಶಿನಿಗಳಲ್ಲಿ ಸೇವೆ ಲಭ್ಯವಿರಲಿದೆ. ಇಂತಹ ದರ್ಶಿನಿಗಳಲ್ಲಿ ಕುಳಿತುಕೊಳ್ಳುವ ವ್ಯವಸ್ಥೆ ಇರುವುದಿಲ್ಲ. ನಿಂತು ಊಟ–ಉಪಾಹಾರ ಸೇವಿಸಬಹುದಾಗಿದೆ. ಹಾಗೇ ಮನೆಗಳಿಗೆ ಪಾರ್ಸೆಲ್ ತೆಗೆದಕೊಂಡು ಹೋಗಬಹುದು ಎಂದು ಬೃಹತ್ ಬೆಂಗಳೂರು ಹೋಟೆಲುಗಳ ಸಂಘ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.