ADVERTISEMENT

ಸದನ ಸಮಿತಿ: 27ರಿಂದ ನರ್ಸಿಂಗ್‌ ಕಾಲೇಜುಗಳಿಗೆ ಭೇಟಿ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2023, 16:03 IST
Last Updated 22 ಸೆಪ್ಟೆಂಬರ್ 2023, 16:03 IST
   

ಬೆಂಗಳೂರು: ನರ್ಸಿಂಗ್‌ ಕಾಲೇಜುಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ತನಿಖೆ ನಡೆಸಲು ಸರ್ಕಾರ ರಚಿಸಿರುವ ಜಂಟಿ ಸದನ ಸಮಿತಿ ಸೆ.27ರಿಂದ ಕಾಲೇಜುಗಳಿಗೆ ಭೇಟಿ ನೀಡಲಿದೆ.

ನರ್ಸಿಂಗ್ ಕಾಲೇಜುಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ 2021ರಲ್ಲಿ ನಡೆದ ವಿಧಾನಮಂಡಲ ಕಲಾಪದಲ್ಲಿ ದೊಡ್ಡ ಮಟ್ಟದ ಚರ್ಚೆ ನಡೆದಿತ್ತು. ಈ ಬಗ್ಗೆ ಸಮಗ್ರ ತನಿಖೆ ನಡೆಸಲು ಜಂಟಿ ಸದನ ಸಮಿತಿ ರಚಿಸುವಂತೆ ಜೆಡಿಎಸ್‌ ಸದಸ್ಯರು ಸದನದೊಳಗೆ ಪ್ರತಿಭಟನೆ ನಡೆಸಿದ್ದರು. ಅಂದು ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌. ಯಡಿಯೂರಪ್ಪ ಅವರು ಜಂಟಿ ಸದನ ಸಮಿತಿ ರಚಿಸಲು ಒಪ್ಪಿಗೆ ನೀಡಿದ್ದರು.

‘ಪರಿಶೀಲನಾ ಪಟ್ಟಿ ಸಿದ್ಧಪಡಿಸಲಾಗಿದೆ. ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿಯೇ ವರದಿ ಸಲ್ಲಿಸಲು ಚಿಂತನೆ ನಡೆಸಿದ್ದೇವೆ’ ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.