ADVERTISEMENT

ಸರ್ಕಾರಿ ಯೋಜನೆಗಳಿಗೆ ಮನೆತನದ ಹೆಸರು ಸೂಕ್ತವಲ್ಲ: ಗೋವಿಂದ ಕಾರಜೋಳ

​ಪ್ರಜಾವಾಣಿ ವಾರ್ತೆ
Published 13 ಆಗಸ್ಟ್ 2021, 19:30 IST
Last Updated 13 ಆಗಸ್ಟ್ 2021, 19:30 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಚಿತ್ರದುರ್ಗ: ಸರ್ಕಾರದ ಅಭಿವೃದ್ಧಿ ಕಾರ್ಯ ಅಥವಾ ಯಾವುದೇ ಯೋಜನೆಗೆ ರಾಜ ಮನೆತನದ ಮಾದರಿಯಲ್ಲಿ ಮನೆತನಗಳ ಹೆಸರಿಡುವುದು ಸರಿಯಲ್ಲ ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಸರ್ಕಾರದ ಯೋಜನೆಗಳು ವ್ಯಕ್ತಿಗತ, ಮನೆತನಕ್ಕೆ ಸೀಮಿತವಾಗಬಾರದು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಆವಾಸ್‌ ಯೋಜನೆ ಸೇರಿ ಅನೇಕ ಯೋಜನೆಯನ್ನು ಜಾರಿಗೊಳಿಸಿವೆ. ಯಾವುದಕ್ಕೂ ಮನೆತನಗಳ ಹೆಸರನ್ನು ಇಟ್ಟಿಲ್ಲ’ ಎಂದರು.

‘ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಪ್ರಸ್ತಾವ ಸದ್ಯ ಸರ್ಕಾರದ ಮುಂದಿಲ್ಲ. ಸಚಿವ ಸಂಪುಟದ ಮುಂದೆ ಬಂದಾಗ ಬದಲಿಸಬೇಕೋ, ಬೇಡವೋ ಎಂಬ ಕುರಿತು ಉತ್ತರ ನೀಡಲಾಗುವುದು. ತಾತ್ವಿಕವಾಗಿ ಇಂಥ ವಿಚಾರಕ್ಕೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ’ ಎಂದ ಅವರು, ‘ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 74ನೇ ಜನ್ಮದಿನ ಆಚರಿಸಿದ್ದಾರೆ. ಅವರು ನೂರು ಕಾಲ ಬದುಕಲಿ’ ಎಂದು ಪ್ರಾರ್ಥಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.