ಬೆಂಗಳೂರು: ‘ದಿಲ್ಲಿ ಸ್ಪೆಷಲ್ ಪೊಲೀಸ್ ಎಸ್ಟಾಬ್ಲಿಷ್‌ಮೆಂಟ್ ಆ್ಯಕ್ಟ್’ ಪ್ರಕಾರ ರಾಜ್ಯ ಸರ್ಕಾರ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಬಹುದು. ಅದರಂತೆ ಫೋನ್ ಕದ್ದಾಲಿಕೆ ಪ್ರಕರಣವನ್ನೂ ತನಿಖೆಗೆ ಒಪ್ಪಿಸಬಹುದು’ ಎಂದು ಹೈಕೋರ್ಟ್‌ನಲ್ಲಿ ಸಿಬಿಐ ಪರ ವಕೀಲ ಪಿ.ಪ್ರಸನ್ನಕುಮಾರ್ ತಿಳಿಸಿದರು.
‘ಈ ಬಗ್ಗೆ ಮೊದಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಬೇಕು. ಈ ಅಧಿಸೂಚನೆಯ ಜೊತೆಗೆ ಪ್ರಕರಣಕ್ಕೆ ಸಂಬಂಧಿಸಿದ ಮಾಹಿತಿಯನ್ನು ದೂರಿನ ರೂಪದಲ್ಲಿ ಸಿಬಿಐಗೆ ಸರ್ಕಾರ ನೀಡುತ್ತದೆ. ಅದರ ಆಧಾರದಲ್ಲಿ ಸಾಮಾನ್ಯ ಪ್ರಕರಣ (ರೆಗ್ಯುಲರ್ ಕೇಸ್) ಎಂದು ಎಫ್‌ಐಆರ್ ದಾಖಲಿಸಿಕೊಂಡು ಸಿಬಿಐ ತನಿಖೆ ಆರಂಭಿಸಲಿದೆ. ನಂತರ ತನಿಖೆ ಆರಂಭವಾಗಲಿದ್ದು, ಅಗತ್ಯ ಬಿದ್ದರೆ ಬಂಧನ ಪ್ರಕ್ರಿಯೆಯೂ ನಡೆಯಲಿದೆ’ ಎಂದೂ ಅವರು ವಿವರಿಸಿದರು.
ಇನ್ನಷ್ಟು...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.