ADVERTISEMENT

ಬಿಜೆಪಿ ರಾಜ್ಯಾಧ್ಯಕ್ಷರೇ ರಾಜ್ಯದ ಜಿಲ್ಲೆಗಳೆಷ್ಟು? ಕಟೀಲ್‌ ಹೇಳಿಕೆಗೆ ವ್ಯಂಗ್ಯ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2019, 10:44 IST
Last Updated 17 ಅಕ್ಟೋಬರ್ 2019, 10:44 IST
   

ಬೆಂಗಳೂರು: ಪಕ್ಷದ ಸಂಘಟನೆಗಾಗಿ ಪಾದಯಾತ್ರೆಗಳಿಗೆ ವೇಗ ನೀಡಲು 32ನೇ ಜಿಲ್ಲೆಗೆ ಬಂದಿದ್ದೇನೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಹೇಳಿಕೆಯನ್ನು ಕಾಂಗ್ರೆಸ್‌ ಗೇಲಿ ಮಾಡಿದೆ.

‘ನಳಿನ್‌ ಕುಮಾರ್‌ ಕಟೀಲ್‌ ಅವರೇ, ರಾಜ್ಯದಲ್ಲಿರುವುದು 32 ಜಿಲ್ಲೆಗಳಾ? ರಾಜ್ಯದಲ್ಲೆಷ್ಟು ಜಿಲ್ಲೆಗಳಿವೆ ಎಂಬ ಕನಿಷ್ಠ ಜ್ಞಾನವೂ ಇಲ್ಲದ ನೀವು ರಾಜ್ಯವನ್ನು ಲೋಕಸಭೆಯಲ್ಲಿ ಪ್ರತಿನಿಧಿಸುತ್ತಿದ್ದೀರಿ. ಮತ್ತು, ಕರ್ನಾಟಕ ಬಿಜೆಪಿಯ ಅಧ್ಯಕ್ಷರಾಗಿದ್ದೀರಿ. ಪ್ರಾಥಮಿಕ ಶಾಲೆಯ ಪಠ್ಯ ಪುಸ್ತಕವನ್ನು ಒಮ್ಮೆ ಕೊಂಡು ಓದಿ. ಕನಿಷ್ಠ ಸಾಮಾನ್ಯ ಜ್ಞಾನ ವೃದ್ಧಿಸಿಕೊಳ್ಳಿ’ ಎಂದು ಕಾಂಗ್ರೆಸ್‌ ವ್ಯಂಗ್ಯವಾಡಿದೆ.

ಗುರುವಾರ ಮಾಧ್ಯಮ ಪ್ರತಿನಿಧಗಳೊಂದಿಗೆ ಮಾತನಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌, ‘ರಾಜ್ಯದೆಲ್ಲೆಡೆ ಬಿಜೆಪಿ ಪಾದಯಾತ್ರೆಗಳನ್ನು ನಡೆಸುತ್ತಿದೆ. ಅದಕ್ಕೆ ವೇಗ ಕೊಡಲು ಯಾದಗಿರಿ ಮತ್ತು ರಾಯಚೂರಿಗೆ ಬಂದಿದ್ದೇನೆ. ಈಗಾಗಲೇ 31ನೇ ಜಿಲ್ಲೆ ಮುಗಿಸಿಕೊಂಡು ಇಂದು 32ನೇ ಜಿಲ್ಲೆ ಯಾದಗಿರಿಗೆ ಬಂದಿದ್ದೇನೆ,’ ಎಂದು ಹೇಳಿಕೆ ಕೊಟ್ಟಿದ್ದರು.

ADVERTISEMENT

ಸದ್ಯ ರಾಜ್ಯದಲ್ಲಿ ಅಸ್ತಿತ್ವದಲ್ಲಿರುವುದು 30 ಜಿಲ್ಲೆಗಳ ಮಾತ್ರ. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್‌ ಅವರು ಜಿಲ್ಲೆಗಳ ಸಂಖ್ಯೆಯನ್ನು 32ಕ್ಕೆ ಹೆಚ್ಚಿಸಿದ್ದು ಕಾಂಗ್ರೆಸ್‌ನ ವ್ಯಂಗ್ಯಕ್ಕೆ ಗುರಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.