ADVERTISEMENT

ರಾಜ್ಯ ಘಟಕದ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಆಯ್ಕೆ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2025, 6:20 IST
Last Updated 20 ಫೆಬ್ರುವರಿ 2025, 6:20 IST
   

ಬೆಂಗಳೂರು: ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಎಚ್.ಎಸ್.ಮಂಜುನಾಥ್ ಆಯ್ಕೆಯಾಗಿದ್ದಾರೆ.

ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಎಚ್.ಎಸ್.ಮಂಜುನಾಥ್ 5,67,343 ಮತಗಳನ್ನು ಪಡೆಯುವ ಮೂಲಕ ಮೊದಲ ಸ್ಥಾನ ಪಡೆದುಕೊಂಡಿದ್ದರು.

ದೀಪಿಕಾ ರೆಡ್ಡಿ 2,95,705 ಮತಗಳನ್ನು ಪಡೆದು ಎರಡನೇ ಸ್ಥಾನ, ಅಬ್ದುಲ್ ರಹಿಮಾನ್ 45,968 ಮತ ಗಳಿಸಿ ಮೂರನೇ ಸ್ಥಾನ ಪಡೆದಿದ್ದರು.

ADVERTISEMENT

ಈ ಬಗ್ಗೆ ಇಂಡಿಯನ್‌ ಯೂತ್‌ ಕಾಂಗ್ರೆಸ್‌ ಅಧ್ಯಕ್ಷ ಉದಯ್‌ ಭಾನು ಚಿಬ್‌ ಅವರು ಪ್ರಕಟನೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.