ಬೆಂಗಳೂರು: ‘ಹುಬ್ಬಳ್ಳಿಯಲ್ಲಿ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ’ ಎಂಬ ಆರೋಪದಡಿ ಪೊಲೀಸ್ ಎನ್‌ಕೌಂಟರ್‌ನಲ್ಲಿ ಮೃತಪಟ್ಟ ವಲಸೆ ಕಾರ್ಮಿಕ ಪಾಟ್ನಾದ ರಿತೇಶ್ ಕುಮಾರ್ ಪ್ರಕರಣಕ್ಕೆ ಸಂಬಂಧಿಸಿದ ಈವರೆಗಿನ ತನಿಖಾ ವರದಿಯನ್ನು ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಮೂರು ವಾರಗಳ ಗಡುವು ನೀಡಿದೆ.
ಈ ಕುರಿತಂತೆ, ‘ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್–ಕರ್ನಾಟಕ’ (ಪಿಯುಸಿಎಲ್) ಸಂಘಟನೆಯ ಪ್ರಧಾನ ಕಾರ್ಯದರ್ಶಿ ಇ.ಶುಜಾಯುತ್ ಉಲ್ಲಾ ಮತ್ತು ಮಹಿಳಾ ಹಕ್ಕುಗಳ ಹೋರಾಟಗಾರ್ತಿ ಮಧು ಭೂಷಣ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
‘ಪ್ರಕರಣದಲ್ಲಿ ಈವರೆಗೆ ಆಗಿರುವ ತನಿಖೆಯ ವರದಿಯನ್ನು ಮೂರು ವಾರಗಳಲ್ಲಿ ಸಲ್ಲಿಸಿ’ ಎಂದು ಸರ್ಕಾರದ ಪರ ವಕೀಲರಿಗೆ ನಿರ್ದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.