ADVERTISEMENT

ಮೂರು ಮಹಾನಗರ ಪಾಲಿಕೆಗಳ ಚುನಾವಣೆಗೆ ಇಂದು ಮತದಾನ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2021, 1:33 IST
Last Updated 3 ಸೆಪ್ಟೆಂಬರ್ 2021, 1:33 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಬ್ಬಳ್ಳಿ: ಹುಬ್ಬಳ್ಳಿ–ಧಾರವಾಡ, ಬೆಳಗಾವಿ ಹಾಗೂ ಕಲಬುರ್ಗಿ ಮಹಾನಗರ ಪಾಲಿಕೆಗಳ ಚುನಾವಣೆಗೆ ಶುಕ್ರವಾರ ಮತದಾನ ನಡೆಯಲಿದೆ.

ಹುಬ್ಬಳ್ಳಿ–ಧಾರವಾಡ ಪಾಲಿಕೆಯ 82,ಕಲಬುರ್ಗಿ ಪಾಲಿಕೆಯ 55 ಹಾಗೂ ಬೆಳಗಾವಿ ಪಾಲಿಕೆಯ 58 ವಾರ್ಡ್‌ಗಳಲ್ಲಿಬೆಳಿಗ್ಗೆ 7 ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಗಳ ಆಧಾರದ ಮೇಲೆ ಸ್ಪರ್ಧಿಸುತ್ತಿವೆ. ಈ ಹಿಂದೆ ಭಾಷೆ ಆಧಾರದ ಮೇಲೆ ಪಕ್ಷೇತರರಾಗಿ ಸ್ಪರ್ಧಿಸುತ್ತಿದ್ದರು. ಒಟ್ಟು 385 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.