ADVERTISEMENT

ಮೂರು ಮಹಾನಗರ ಪಾಲಿಕೆಗಳ ಚುನಾವಣೆ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ಮಾಹಿತಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಆಗಸ್ಟ್ 2021, 10:26 IST
Last Updated 11 ಆಗಸ್ಟ್ 2021, 10:26 IST
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಚೇರಿ– ಸಾಂದರ್ಭಿಕ ಚಿತ್ರ
ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಕಚೇರಿ– ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದ ಮೂರು ಮಹಾನಗರ ಪಾಲಿಕೆಗಳ ಚುನಾವಣೆ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಮತ್ತು ಕಲಬುರ್ಗಿಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್‌ 3ರಂದು ಮತದಾನ ನಡೆಯಲಿದೆ.

ಆ.16(ಸೋಮವಾರ)ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23(ಸೋಮವಾರ) ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ADVERTISEMENT

ಆ.26(ಗುರುವಾರ) ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದ್ದು, ಸೆ.3(ಶುಕ್ರವಾರ) ರಂದು ಮತದಾನ ನಡೆಯಲಿದೆ.

ಮತಗಳ ಎಣಿಕೆಯು ಸೆ.6 (ಸೋಮವಾರ) ರಂದು ನಡೆಯಲಿದೆ.

ಬೆಳಗಾವಿಯ 58 ವಾರ್ಡ್‌ಗಳಿಗೆ, ಹುಬ್ಬಳ್ಳಿ-ಧಾರವಾಡದ 82 ವಾರ್ಡ್‌ಗಳಿಗೆ, ಕಲಬುರ್ಗಿಯ 55 ವಾರ್ಡ್‌ಗಳಿಗೆ ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.