ADVERTISEMENT

ಹುಬ್ಬಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 7:47 IST
Last Updated 26 ಸೆಪ್ಟೆಂಬರ್ 2022, 7:47 IST
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಸ್ವಾಗತ   

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಿರುವ ಪೌರಸನ್ಮಾನ ಹಾಗೂ ಧಾರವಾಡ ತಡಸಿನಕೊಪ್ಪದ ಐಐಐಟಿ ಉದ್ಘಾಟನೆಗೆ ಆಗಮಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ಥಾವರಚಂದ್ ಗೆಹಲೋತ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಹಾಲಪ್ಪ ಆಚಾರ, ಶಂಕರಪಾಟೀಲ ಮುನೇನಕೊಪ್ಪ, ಶಾಸಕ ಜಗದೀಶ ಶೆಟ್ಟರ್, ವಿಧಾನಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ್, ಸಲೀಂ ಅಹ್ಮದ್, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮೇಯರ್ ಈರೇಶ ಅಂಚಟಗೇರಿ, ಸರ್ಕಾರದ ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ ಗೋಯೆಲ್, ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಪೊಲೀಸ್ ಕಮಿಷನರ್ ಲಾಭೂರಾಮ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT