
ಕಡತ
(ಸಾಂದರ್ಭಿಕ ಚಿತ್ರ)
ನವದೆಹಲಿ: ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಡಿಗಡಿಗೆ ಲಂಚ ಕೇಳಿರುವ ಪ್ರಕರಣದ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕು ಆಯೋಗವು ಎರಡು ವಾರಗಳಲ್ಲಿ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ತಾಕೀತು ಮಾಡಿದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿರುವ ಆಯೋಗವು, ‘ಆಡಳಿತ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಹಾಗೂ ಅಮಾನವೀಯತೆಗೆ ಈ ಘಟನೆ ಸಾಕ್ಷಿ. ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ’ ಎಂದು ಹೇಳಿದೆ.
ಪುತ್ರಿಯ ಮೃತದೇಹ ಸಾಗಿಸಲು ಹಾಗೂ ಮರಣೋತ್ತರ ಪರೀಕ್ಷೆ ನಡೆಸಲು ಪಟ್ಟ ಸಂಕಷ್ಟ ಹಾಗೂ ಆಂಬುಲೆನ್ಸ್ ಚಾಲಕ, ಪೊಲೀಸರು, ಸ್ಮಶಾನದ ಸಿಬ್ಬಂದಿ
ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಅಧಿಕಾರಿಗಳಿಂದ ಅನುಭವಿಸಿದ ನೋವು ಹಾಗೂ ಸಿಬ್ಬಂದಿ ಹಣಕ್ಕೆ ಬೇಡಿಕೆಯಿಟ್ಟ ಬಗೆಯನ್ನು ಭಾರತ್ ಪೆಟ್ರೋಲಿಯಂ ನಿಗಮದ ನಿವೃತ್ತ ಸಿಎಫ್ಒ ಕೆ.ಶಿವಕುಮಾರ್ ಅವರು ‘ಲಿಂಕ್ಡ್ಇನ್’ನಲ್ಲಿ ಹೇಳಿಕೊಂಡಿದ್ದರು.
ಪುತ್ರಿಯ ಅಂತ್ಯಸಂಸ್ಕಾರಕ್ಕೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಡಿಗಡಿಗೂ ಲಂಚ ಕೇಳಿದ ಸಂಗತಿಯನ್ನು ಕೇಂದ್ರ ಸರ್ಕಾರದ ಸ್ವಾಮ್ಯದ ಕಂಪನಿಯಲ್ಲಿ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ಆಗಿದ್ದ ಶಿವಕುಮಾರ್ ಅವರು ನೋವಿನಿಂದ ಹೇಳಿಕೊಂಡಿದ್ದರು. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಕಟವಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.