ADVERTISEMENT

ಕಾಡುಪ್ರಾಣಿಗಳ ದಾಳಿ: ಕರ್ನಾಟಕದಲ್ಲಿ ಈ ವರ್ಷ 44 ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 24 ಜುಲೈ 2025, 14:23 IST
Last Updated 24 ಜುಲೈ 2025, 14:23 IST
ಆನೆ ದಾಳಿ–ಸಾಂದರ್ಭಿಕ ಚಿತ್ರ
ಆನೆ ದಾಳಿ–ಸಾಂದರ್ಭಿಕ ಚಿತ್ರ   

ನವದೆಹಲಿ: ಕರ್ನಾಟಕದಲ್ಲಿ ಮಾನವ–ವನ್ಯಜೀವಿ ಸಂಘರ್ಷದಿಂದ 2024–25ನೇ ಸಾಲಿನಲ್ಲಿ 44 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಅರಣ್ಯ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್‌ ತಿಳಿಸಿದ್ದಾರೆ. 

ರಾಜ್ಯಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ನಾರಾಯಣ ಕೊರಗಪ್ಪ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಕಾಡು ಪ್ರಾಣಿಗಳ ದಾಳಿಯಿಂದಾಗಿ 10 ಮಂದಿ ಶಾಶ್ವತ ಅಂಗವೈಕಲ್ಯ ಹಾಗೂ 10 ಮಂದಿ ಭಾಗಶಃ ಅಂಗವೈಕಲ್ಯಕ್ಕೆ ಒಳಗಾಗಿದ್ದಾರೆ. 278 ಮಂದಿ ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 

2019–20ರಿಂದ 2023–24ರ ಅವಧಿಯಲ್ಲಿ ಹುಲಿಗಳ ದಾಳಿಯಿಂದಾಗಿ 18 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.