ಹುಬ್ಬಳ್ಳಿ: ನಗರದ ಹಿರೇಪೇಟೆಯ ಮುಖ್ಯ ರಸ್ತೆಯಲ್ಲಿ ಶನಿವಾರ ಬೆಳಿಗ್ಗೆ ಬಿದ್ದಿದ್ದ ₹ 100ರ ನೋಟು ಸುತ್ತಲಿನ ನಿವಾಸಿಗಳಲ್ಲಿ ಆತಂಕಕ್ಕೆ ಕಾರಣವಾಯಿತು.
ಕೊರೊನಾ ಹಿನ್ನೆಲೆಯಲ್ಲಿ ಹಣ ಬಿದ್ದಿದ್ದ ವಿಷಯ ವಿಧ ವಿಧ ಚರ್ಚೆಗಳಿಗೆ ಕಾರಣವಾಯಿತು. ಸ್ವಲ್ಪ ಸಮಯದ ನಂತರ ವ್ಯಕ್ತಿಯೊಬ್ಬ ಕೈಗಳಿಗೆ ಹಾಗೂ ನೋಟಿಗೆ ಸ್ಯಾನಿಟೈಸರ್ ಸಿಂಪಡಿಸಿ ಆ ನೋಟನ್ನು ಜೇಬಿಗಿಳಿಸಿಕೊಂಡ! ದೂರದಲ್ಲಿ ನಿಂತಿದ್ದ ಪೊಲೀಸ್ ವಾಹನ ಕಾಣುತ್ತಿದ್ದಂತೆ ಜನ ಚದುರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.