ADVERTISEMENT

ಚುನಾವಣೆ: ಪತ್ನಿಗೆ ಎಸ್‌ಟಿ ಪ್ರಮಾಣಪತ್ರ ನೀಡುತ್ತಿಲ್ಲ ಎಂದು ವಿಷ ಸೇವಿಸಿದ ಪತಿ

ಗ್ರಾಮ ಪಂಚಾಯಿತಿ ಚುನಾವಣೆ

​ಪ್ರಜಾವಾಣಿ ವಾರ್ತೆ
Published 12 ಡಿಸೆಂಬರ್ 2020, 19:31 IST
Last Updated 12 ಡಿಸೆಂಬರ್ 2020, 19:31 IST

ಅಫಜಲಪುರ (ಕಲಬುರ್ಗಿ ಜಿಲ್ಲೆ): ‘ತಾಲ್ಲೂಕಿನ ಗೌರ (ಬಿ) ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಿರುವ ಶ್ರೀದೇವಿ ಕೋಳಿ ಅವರಿಗೆ ತಹಶೀಲ್ದಾರ್ ಎಸ್‌ಟಿ ಪ್ರಮಾಣಪತ್ರ ನೀಡುತ್ತಿಲ್ಲ’ ಎಂದು ಆರೋಪಿಸಿ ಕೋಲಿ ಸಮಾಜದ ಮುಖಂಡರು ಶನಿವಾರ ತಹಶೀಲ್ದಾರ್ ಕಚೇರಿ ಎದುರು ಧರಣಿ ನಡೆಸಿದರು.

ಧರಣಿ ಸ್ಥಳದಲ್ಲೇ ಶ್ರೀದೇವಿ ಅವರ ಪತಿ ಶರಣಬಸಪ್ಪ ದಿವಾಣಜಿ ವಿಷ ಸೇವಿಸಿದರು. ತಕ್ಷಣವೇ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಕಲಬುರ್ಗಿಯ ಜಿಮ್ಸ್‌ ಆಸ್ಪತ್ರೆಗೆದಾಖಲಿಸಲಾಯಿತು.

‘ಗೌರ (ಬಿ) ಗ್ರಾಮದ ವಾರ್ಡ್‌ ಸಂಖ್ಯೆ 1 ಪರಿಶಿಷ್ಟ ಪಂಗಡದ ಮಹಿಳೆಗೆ ಮೀಸಲಾಗಿದೆ. ಶ್ರೀದೇವಿ ಅವರು ಮಹಾರಾಷ್ಟ್ರದ ಸಲಗರ ಗ್ರಾಮದವರು. ಅಲ್ಲಿ ನೀಡಿರುವ ಪರಿಶಿಷ್ಟ ಪಂಗಡದ ಪ್ರಮಾಣಪತ್ರ ಲಗತ್ತಿಸಿ ಅವರು ಚುನಾವಣೆಗೆ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಆದರೆ, ನಾಮಪತ್ರ ತಿರಸ್ಕೃತವಾಗುವ ಆತಂಕದಿಂದ ಸ್ಥಳೀಯ ಜಾತಿ ಪ್ರಮಾಣಪತ್ರಕ್ಕಾಗಿ ವಾರದ ಹಿಂದೆಯೇ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಈವರೆಗೆ ಅವರಿಗೆ ಪ್ರಮಾಣಪತ್ರ ನೀಡಲಾಗಿಲ್ಲ’ ಎಂದು ಪ್ರತಿಭಟನಾಕಾರರು ದೂರಿದರು.

ADVERTISEMENT

‘ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿದ ನಂತರವಷ್ಟೇ ನಿರ್ಧಾರ ಕೈಗೊಳ್ಳಲಾಗುವುದು’ ತಹಶೀಲ್ದಾರ್‌ ನಾಗಮ್ಮ ಎಂ.ಕೆ. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.