ಬಾಂಬ್ ಬೆದರಿಕೆ
ನವದೆಹಲಿ: ಕರ್ನಾಟಕದಲ್ಲಿ 2021ರಿಂದ 2025ರ ಜುಲೈ 20ರ ವರೆಗೆ ವಿಮಾನಗಳಿಗೆ 94 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ ಎಂದು ನಾಗರಿಕ ವಿಮಾನಯಾನ ಖಾತೆಯ ರಾಜ್ಯ ಸಚಿವ ಮುರಳೀಧರ ಮೊಹೊಲ್ ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ಚಿತ್ರದುರ್ಗ ಸಂಸದ ಗೋವಿಂದ ಕಾರಜೋಳ ಕೇಳಿದ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು, ಈ ಪ್ರಕರಣಗಳಲ್ಲಿ ಈ ವರೆಗೆ ಯಾವುದೇ ಆರೋಪಿಯನ್ನು ಬಂಧಿಸಿಲ್ಲ ಎಂದು ತಿಳಿಸಿದ್ದಾರೆ.
ದೇಶದಲ್ಲಿ 2022ರಿಂದ ಈವರೆಗೆ ವಿಮಾನಗಳಿಗೆ 881 ಹುಸಿ ಬಾಂಬ್ ಬೆದರಿಕೆ ಕರೆಗಳು ಬಂದಿವೆ. ಈ ಪೈಕಿ, 2024ರಲ್ಲೇ 728 ಕರೆಗಳನ್ನು ಸ್ವೀಕರಿಸಲಾಗಿದೆ. ಈ ವರ್ಷ 69 ಪ್ರಕರಣಗಳು ದಾಖಲಾಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.