ADVERTISEMENT

ಹೂವಿನಹಡಗಲಿ ಶಾಸಕ ಪರಮೇಶ್ವರ ನಾಯ್ಕಗೆ ಕೋವಿಡ್‌-19 ಧೃಢ 

​ಪ್ರಜಾವಾಣಿ ವಾರ್ತೆ
Published 16 ಜುಲೈ 2020, 15:00 IST
Last Updated 16 ಜುಲೈ 2020, 15:00 IST
ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ
ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ   

ಹೂವಿನಹಡಗಲಿ: ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಅವರಿಗೆ ಗುರುವಾರ ಕೋವಿಡ್‌ ದೃಢಪಟ್ಟಿದ್ದು, ಹರಪನಹಳ್ಳಿಯ ಅವರ ಮನೆಯನ್ನು ಅಲ್ಲಿನ ಅಧಿಕಾರಿಗಳು ಸೀಲ್‌ಡೌನ್ ಮಾಡಿದ್ದಾರೆ.

‘ಕೆಲವು ದಿನಗಳಿಂದ ಅನಾರೋಗ್ಯದಿಂದ ಅವರು ಹರಪನಹಳ್ಳಿಯ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಈಚೆಗೆ ಹರಪನಹಳ್ಳಿಯ ಆಸ್ಪತ್ರೆಯಲ್ಲೇ ತಪಾಸಣೆಗೆ ಒಳಗಾಗಿದ್ದರು. ಗುರುವಾರ ಅವರ ವೈದ್ಯಕೀಯ ವರದಿ ಪಾಸಿಟಿವ್ ಬಂದಿದೆ.

ಬೆನ್ನು ನೋವಿನ ಚಿಕಿತ್ಸೆಗಾಗಿ ಅವರು ಬುಧವಾರವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಗೊತ್ತಾಗಿದೆ.

ADVERTISEMENT

‘ಪರಮೇಶ್ವರ ನಾಯ್ಕ ಅವರು 10-12 ದಿನಗಳಿಂದ ಕ್ಷೇತ್ರಕ್ಕೆ ಭೇಟಿ ನೀಡಿಲ್ಲ. ಪಟ್ಟಣದಲ್ಲಿರುವ ಅವರ ನಿವಾಸಕ್ಕೂ ಬಂದಿಲ್ಲ. ಹೀಗಾಗಿ ಇಲ್ಲಿನ ಅವರ ಮನೆಯನ್ನು ಸೀಲ್ ಡೌನ್ ಮಾಡುವುದಿಲ್ಲ’ ಎಂದು ತಹಶೀಲ್ದಾರ್ ಕೆ.ವಿಜಯಕುಮಾರ್ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.