ADVERTISEMENT

ಕಾಂಗ್ರೆಸ್‌, ಬಿಜೆಪಿ ಸರ್ಕಾರಗಳಲ್ಲಿ ಪಠ್ಯಕ್ಕೆ ಆದ ಅಪಚಾರದ ಅಧ್ಯಯನ: ಎಚ್‌ಡಿಕೆ’

​ಪ್ರಜಾವಾಣಿ ವಾರ್ತೆ
Published 23 ಜೂನ್ 2022, 18:28 IST
Last Updated 23 ಜೂನ್ 2022, 18:28 IST
   

ಬೆಂಗಳೂರು: ‘ಕಾಂಗ್ರೆಸ್‌ ಮತ್ತು ಬಿಜೆಪಿ ಸರ್ಕಾರಗಳ ಅವಧಿಯಲ್ಲಿ ಪಠ್ಯಕ್ಕೆ ಏನೆಲ್ಲಾ ಅಪಚಾರ ಆಗಿದೆ ಎಂಬುದನ್ನು ನಾನೂ ಅಧ್ಯಯನ ಮಾಡುತ್ತಿದ್ದೇನೆ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರ ಜತೆಗುರುವಾರ ಮಾತನಾಡಿದ ಅವರು, ಪಠ್ಯಪುಸ್ತಕದ ಬಗ್ಗೆ ಪರ–ವಿರೋಧ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್‌ ಒಂದು ಕಡೆ ಪಠ್ಯದ ವಿರುದ್ಧ ಮಾತನಾಡುತ್ತಿದೆ. ಸಿದ್ದರಾಮಯ್ಯ ಸರ್ಕಾರ ಪಠ್ಯ ರಚನೆ ಮಾಡಿದ ವಿರುದ್ಧ ಆಪಾದನೆ ಮಾಡುತ್ತಿರುವ ಬಿಜೆಪಿ ಸಚಿವರು ಆಗಿನ ಸರ್ಕಾರ ತಪ್ಪು ಮಾಡಿದೆ ಎಂದು ಹೇಳುತ್ತಿದ್ದಾರೆ ಎಂದರು.

ಕುವೆಂಪು ಅವರಿಗೆ ಅಪಮಾನ ಮಾಡಿದ್ದಾರೆಂದು ಕುವೆಂಪು ವೇದಿಕೆ ಅವರು ಎಚ್‌.ಡಿ.ದೇವೇಗೌಡರಿಗೆ ಆಹ್ವಾನ ಕೊಟ್ಟಿದ್ದರು. ಆದ್ದರಿಂದ ದೇವೇಗೌಡರು ಹೋರಾಟಕ್ಕೆ ಹೋಗಿದ್ದರು ಎಂದು ಕುಮಾರಸ್ವಾಮಿ ಹೇಳಿದರು.

ADVERTISEMENT

ಕೋರ್ ಕಮಿಟಿ ನಿರ್ಧಾರ: ಶಾಸಕರಾದ ಗುಬ್ಬಿ ಶ್ರೀನಿವಾಸ್ ಮತ್ತು ಕೆ.ಶ್ರೀನಿವಾಸಗೌಡ ಅವರನ್ನು ಉಚ್ಘಾಟನೆ ಮಾಡಿರುವುದು ಪ್ರಮುಖ ನಾಯಕರ ನಿರ್ಧಾರ. ಪಕ್ಷದ ವಿರುದ್ಧ ಅಡ್ಡ ಮತದಾನ ಮಾಡಿದ್ದಕ್ಕೆ ಉಚ್ಛಾಟನೆ ಮಾಡಲಾಗಿದೆ ಎಂದರು.

‘ಈ ಸಂಬಂಧ ಕೋರ್ಟ್‌ಗೆ ಹೋಗುವುದು ಅಥವಾ ವಿಧಾನಸಭೆ ಸ್ವೀಕರ್‌ಗೆ ದೂರು ನೀಡುವುದರಿಂದ ಏನೂ ಆಗದು. ಮೊದಲು ಈ ವ್ಯವಸ್ಥೆ ಬದಲಾವಣೆ ಆಗಬೇಕು. ನಮ್ಮ ಸರ್ಕಾರ ಬಂದರೆ ಈ ಕಾನೂನುಗಳಿಗೆ ಬಲ ಕೊಡುವ ಕೆಲಸ ಮಾಡಲಾಗುವುದು’ ಎಂದು ಕುಮಾರಸ್ವಾಮಿ
ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.