
ಪ್ರಜಾವಾಣಿ ವಾರ್ತೆ
ನವದೆಹಲಿ; 2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ನೇಹಿತರೇ ನನ್ನನ್ನು ಸೋಲಿಸಿದರು. ನಾನು ಅದನ್ನು ಮತ ಕಳವು ಎಂಬುದಾಗಿ ಹೇಳಲಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ವ್ಯಂಗ್ಯವಾಗಿ ಹೇಳಿದರು.
ರಾಜ್ಯಸಭೆಯಲ್ಲಿ ಸೋಮವಾರ ನಡೆದ ಚುನಾವಣೆ ಸುಧಾರಣೆ ಕುರಿತು ಚರ್ಚೆಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ದೇವೇಗೌಡರ ಮಾತಿಗೆ ಕಾಂಗ್ರೆಸ್ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿ ಅಡ್ಡಿಪಡಿಸಿದರು.
ಜೆಡಿಎಸ್ ಅನ್ನು ಸಂಪೂರ್ಣವಾಗಿ ನಾಶ ಪಡಿಸಲು ಕಾಂಗ್ರೆಸ್ ನಾಯಕರು ನಿರಂತರ ಪ್ರಯತ್ನ ಮಾಡಿದರು. ಲೋಕಸಭಾ ಚುನಾವಣೆಗೆ ಮುನ್ನ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡೆವು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.