ADVERTISEMENT

‘ಯಡಿಯೂರಪ್ಪ ಕುಟುಂಬ ರಾಜಕಾರಣ’ 45 ಪ್ಯಾರಾದಲ್ಲಿ ಹೈಕಮಾಂಡ್‌ಗೆ ಪತ್ರ: ಯತ್ನಾಳ್

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 10:55 IST
Last Updated 18 ಫೆಬ್ರುವರಿ 2021, 10:55 IST
   

ಬೆಂಗಳೂರು:'ನನಗೆ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಹನ್ನೊಂದು ಪುಟಗಳ ಉತ್ತರ ನೀಡಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪ್ರಸ್ತಾಪಿಸಿದ್ದೇನೆ' ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ನರೇಂದ್ರ ಮೋದಿ ಅವರ ಆಶಯದಂತೆರಾಜ್ಯದಲ್ಲೂ ಕುಟುಂಬ ಹಸ್ತಕ್ಷೇಪ ಇಲ್ಲದ ಸರ್ಕಾರ ಇರಬೇಕು. ಆದರೆ, ಅವರ ಆಶಯದಂತೆ ಇಲ್ಲಿ ಸರ್ಕಾರ ಇಲ್ಲ' ಎಂದರು.

'ಯಡಿಯೂರಪ್ಪ ಅವರ ಕುಟುಂಬ ರಾಜಕಾರಣವನ್ನು ನಲ್ವತ್ತೈದು ಪ್ಯಾರಾದಲ್ಲಿ ಬರೆದಿದ್ದೇನೆ. ಯಡಿಯೂರಪ್ಪ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಬಿಜೆಪಿ ಆಶಯಕ್ಕೆ ತಕ್ಕಂತೆ ಅಧಿಕಾರ ನಡೆಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದಬಗ್ಗೆ ತನಿಖೆಗೆ ಒತ್ತಾಯಿಸಿದ್ದೇನೆ' ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.