ADVERTISEMENT

ಹೈಕಮಾಂಡ್ ಏನು ಹೇಳುತ್ತೋ ಹಾಗೆ ನಡೆದುಕೊಳ್ಳುತ್ತೇನೆ: ಲಕ್ಷ್ಮಿ ಹೆಬ್ಬಾಳ್ಕರ್

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 8:28 IST
Last Updated 14 ಮಾರ್ಚ್ 2019, 8:28 IST
   

ಬೆಂಗಳೂರು:‘ಪಕ್ಷದ ಹೈಕಮಾಂಡ್ ಹೇಗೆ ಹೇಳುತ್ತದೆಯೋ ಅದಕ್ಕೆ ಬದ್ಧಳಾಗಿರುತ್ತೇನೆ’ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿದರು.

‘ಕಳೆದ ಬಾರಿ ನಾನು ಕೆಲಸ ಮಾಡಿ ಲೋಕಸಭಾ ಚುನಾವಣೆಗೆ ಟಿಕೆಟ್ ಪಡೆದುಕೊಂಡಿದ್ದೆ. ಮೋದಿ ಅಲೆ ಇದ್ದರೂನಾಲ್ಕು ಲಕ್ಷ ಮತಗಳನ್ನು ಪಡೆದಿದ್ದೆ. ಈ ಬಾರಿ ಶಾಸಕಿ ಆಗಿದ್ದೇನೆ. ಸಾಕಷ್ಟು ಕೆಲಸ ಮಾಡುವುದಿದೆ’ ಎಂದರು.

‘ಬೆಳಗಾವಿಯಿಂದ ಲೋಕಸಭಾ ಅಖಾಡಕ್ಕೆ ಇಳಿಯಲು ಸೂಚಿಸಿದರೆ ಕಣಕ್ಕಿಳಿಯುತ್ತೇನೆ. ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷದ ತೀರ್ಮಾನಕ್ಕೆ ಬದ್ದ. ನಾನಾಗಲಿ, ನನ್ನ ತಮ್ಮನಾಗಲಿಹೈಕಮಾಂಡ್ ಹೇಳಿದಂತೆ ನಡೆದುಕೊಳ್ಳುತ್ತೇವೆ’ಎಂದರು.

ADVERTISEMENT

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಮುಖಂಡರ ಸಭೆ

ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಒಮ್ಮತದ ಅಭ್ಯರ್ಥಿ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ ಆರಂಭವಾಗಿದೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವ. ಸಭೆಯಲ್ಲಿ ಚಿಕ್ಕೋಡಿ ಸಂಸದ ಪ್ರಕಾಶ್ ಹುಕ್ಕೇರಿ, ಸಚಿವ ಸತೀಶ ಜಾರಕಿಹೊಳಿ ಶಾಸಕಿಯರಾದ ಲಕ್ಷ್ಮಿ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಶಾಸಕ ಗಣೇಶ್ ಹುಕ್ಕೇರಿ, ಮಾಜಿ ಶಾಸಕ ಫಿರೋಜ್ ಸೇಟ್ ಸೇರಿ ದಂತೆ ವಿವಿಧ ನಾಯಕರು ಪಾಲ್ಗೊಂಡಿದ್ದಾರೆ.

ಚಿಕ್ಕೋಡಿಯಿಂದ ಹಾಲಿ ಸಂಸದ ಪ್ರಕಾಶ್ ಹುಕ್ಕೇರಿ ಸ್ಪರ್ಧೆ ಖಚಿತವಾಗಿದ್ದು, ಬೆಳಗಾವಿಗೆ ಅಭ್ಯರ್ಥಿಯ ಆಯ್ಕೆ ಅಂತಿಮಗೊಳ್ಳಬೇಕಿದೆ.

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು ಅಂಜಲಿ ನಿಂಬಾಳ್ಕರ್, ಚನ್ನರಾಜ್ ಹೆಬ್ಬಾಳ್ಕರ್, ನಾಗರಾಜ್ ಯಾದವ್, ರಮೇಶ್ ಜಾರಕಿಹೊಳಿ, ವಿವೇಕ್ ರಾವ್ ಪಾಟೀಲ್ ಪ್ರಬಲ ಆಕಾಂಕ್ಷಿ ಗಳಾಗಿದ್ದಾರೆ.

ರಮೇಶ ಜಾರಕಿಹೊಳಿ ಸಭೆಯಲ್ಲಿ ಇಲ್ಲದಿರುವುದರಿಂದ ಸಚಿವ ಸತೀಶ ಜಾರಕಿಹೊಳಿ ನಿರ್ಧಾರ ಬಹುತೇಕ ಅಂತಿಮವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.