ಸಂತೋಷ್ ಲಾಡ್
ಧಾರವಾಡ: ‘ಬಿಜೆಪಿಯಿಂದ ಉಚ್ಚಾಟಿತವಾಗಿರುವ ಶಾಸಕರಾದ ಶಿವರಾಮ ಹೆಬ್ಬಾರ, ಎಸ್.ಟಿ.ಸೋಮಶೇಖರ್ ಅವರು ಕಾಂಗ್ರೆಸ್ ಸೇರ್ಪಡೆಯಾದರೆ ಸ್ವಾಗತಿಸುತ್ತೇವೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದರು.
ನವಲಗುಂದದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಹೆಬ್ಬಾರ, ಸೋಮಶೇಖರ್ ಅವರು ಕಾಂಗ್ರೆಸ್ ಸೇರಲು ಇಚ್ಛಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಹೈಕಮಾಂಡ್‌ನವರು ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿರುತ್ತೇವೆ’ ಎಂದರು.
‘ಬೆಂಗಳೂರಿನ ಎಚ್ಎಎಲ್‌ಗೆ ತನ್ನದೇ ಆದ ಇತಿಹಾಸ ಇದೆ. ಅದನ್ನು ಆಂಧ್ರಪ್ರದೇಶಕ್ಕೆ ಸ್ಥಳಾಂತರಿಸುವಂತೆ ಚಂದ್ರಬಾಬು ನಾಯ್ಡು ಬೇಡಿಕೆ ಇಟ್ಟಿರುವುದು ಖಂಡನೀಯ. ಅವರು ಕೇಂದ್ರದಿಂದ ಅನುದಾನ ಮಂಜೂರು ಮಾಡಿಸಿ ಆಂಧ್ರದಲ್ಲಿ ಬೇರೆ ಘಟಕ ಸ್ಥಾಪಿಸಿದರೆ ಅಲ್ಲಿನ ಜನರಿಗೆ ಅನುಕೂಲವಾಗುತ್ತದೆ’ ಎಂದು ಉತ್ತರಿಸಿದರು.
‘ಗಿಕ್ ಕಾರ್ಮಿಕರ ಮಸೂದೆಯನ್ನು ರಾಜ್ಯಪಾಲರು ಅಂಗೀಕರಿಸಿದ್ಧಾರೆ. ದೇಶದಲ್ಲಿ ಪ್ರಮುಖವಾದ ಮತ್ತು ಸಮರ್ಪಕವಾದ ಮಸೂದೆ ಇದು. ಗಿಗ್ ಆರ್ಥಿಕ ವಲಯದಲ್ಲಿ ಕೆಲಸ ಮಾಡುವವರಿಗೆ ಇದರಿಂದ ಅನುಕೂಲವಾಗಲಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.