ವರ್ಗಾವಣೆ
ಬೆಂಗಳೂರು: ಐಎಎಸ್ ಅಧಿಕಾರಿ ಡಿ. ರಂದೀಪ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆದೇಶ ಹೊರಡಿಸಿದೆ.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆಯನ್ನೂ ರಂದೀಪ್ ಅವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದೆ.
ಬಾಗಲಕೋಟೆಯ ಪುನರ್ವಸತಿ ಮತ್ತು ಪುನರ್‌ನಿರ್ಮಾಣದ ಪ್ರಧಾನ ವ್ಯವಸ್ಥಾಪಕರಾಗಿದ್ದ ಕೆ.ಎಂ. ಜಾನಕಿ ಅವರನ್ನು ಬೆಳಗಾವಿ ಕಂದಾಯ ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.