ಬೆಂಗಳೂರು: ಐಎಎಸ್ ಅಧಿಕಾರಿ ಸುರಳ್ಕರ್ ವಿಕಾಸ್ ಕಿಶೋರ್ ಅವರನ್ನು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿದ್ದು, ಈ ಹುದ್ದೆಯಲ್ಲಿದ್ದ ತ್ರಿಲೋಕ್ ಚಂದ್ರ ಕೆ.ವಿ ಅವರನ್ನು ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ.
ಅಲ್ಲದೇ, ಸುರಳ್ಕರ್ ವಿಕಾಸ್ ಕಿಶೋರ್ ಅವರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಆರೋಗ್ಯ ಮತ್ತು ಶಿಕ್ಷಣ) ವಿಶೇಷ ಆಯುಕ್ತ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಆರೋಗ್ಯ ಇಲಾಖೆ ಆಯುಕ್ತ ಕೆ.ಬಿ. ಶಿವಕುಮಾರ್ ಅವರನ್ನು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.