ವಿಧಾನಸೌಧ
ಬೆಂಗಳೂರು: ರಾಜ್ಯದ ಮೂರು ಜಿಲ್ಲೆಗಳ ಸಹಾಯಕ ಆಯುಕ್ತರ ಹುದ್ದೆಗಳಿಗೆ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ.ಶ್ರವಣ್ ಕುಮಾರ್ (ಐಎಎಸ್) ಅವರನ್ನು ನೇಮಕ ಮಾಡಲಾಗಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಉಪ ವಿಭಾಗದ ಸಹಾಯಕ ಆಯುಕ್ತರಾಗಿ ದಿನೇಶ್ ಕುಮಾರ್ ಮೀನಾ (ಐಎಎಸ್) ಅವರನ್ನು ನೇಮಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಮೀನಾಕ್ಷಿ ಆರ್ಯ (ಐಎಎಸ್) ಅವರನ್ನು ಸರ್ಕಾರ ನೇಮಕ ಮಾಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.