ಬೆಂಗಳೂರು: ಕಂದಾಯ ಇಲಾಖೆ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್ ಅವರಿಗೆ ಅಟಲ್ ಜನಸ್ನೇಹಿ ಕೇಂದ್ರದ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ನೋಂದಣಿ ಐಜಿ ಮತ್ತು ಮುದ್ರಾಂಕ ಆಯುಕ್ತರಾದ ಮುಲ್ಲೈ ಮುಗಿಲನ್ ಎಂ.ಪಿ. ಅವರಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಉಪ ಕಾರ್ಯದರ್ಶಿ ದಲ್ಜೀತ್ ಕುಮಾರ್ ಅವರಿಗೆ ನೋಂದಣಿ (ಜಾಗೃತ) ಡಿಐಜಿ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.