ADVERTISEMENT

ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಭೂ ಹಗರಣ ಕಾರಣ–ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 21:22 IST
Last Updated 8 ಜೂನ್ 2021, 21:22 IST
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ   

ಬೆಂಗಳೂರು: ‘ಮೈಸೂರಿನಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಭೂ ಹಗರಣ ಕಾರಣ. ಅದರ ಬಗ್ಗೆ ಸ್ವತಂತ್ರ ಸಂಸ್ಥೆ ಮೂಲಕ ತನಿಖೆ ನಡೆಸಬೇಕು. ವರ್ಗಾವಣೆ ಶಿಕ್ಷೆ ಅಲ್ಲ. ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದರು.

ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಮೈಸೂರು ಮಹಾ ನಗರಪಾಲಿಕೆಯ ಆಯುಕ್ತರಾಗಿದ್ದ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಡುವಿನ ಜಗಳಕ್ಕೆ ಬಿಜೆಪಿಯ ಸಂಸದ, ಶಾಸಕರು ಮತ್ತು ಜೆಡಿಎಸ್‍ ಶಾಸಕ ಸಾ.ರಾ. ಮಹೇಶ್ ಕಾರಣ. ಮೊದಲಿಗೆ ಒಬ್ಬ ಐಎಎಸ್ ಅಧಿಕಾರಿಯನ್ನು ಬಿಜೆಪಿಯವರು ಬೆಂಬಲಿಸಿದರು. ಅದರಲ್ಲೂ ಸಂಸದ ಪ್ರತಾಪ್ ಸಿಂಹ ಮೊದಲು ರೋಹಿಣಿ ಸಿಂಧೂರಿ ಪರ ಇದ್ದರು. ಬಳಿಕ ವಿರೋಧಿಸಿದರು. ಇಬ್ಬರು ಅಧಿಕಾರಿಗಳನ್ನು ಪರಸ್ಪರ ಎತ್ತಿ ಕಟ್ಟಿದವರೇ ಬಿಜೆಪಿ ಶಾಸಕರು’ ಎಂದು ಆಪಾದಿಸಿದರು

‘ಇಂಥ ಸಂದರ್ಭದಲ್ಲಿ ಜಿಲ್ಲಾ ಮಂತ್ರಿ ಏನು ಮಾಡುತ್ತಿದ್ದರು. ಅವರ ವೈಫಲ್ಯ ಅಲ್ಲವೇ’ ಎಂದು ಪ್ರಶ್ನಿಸಿದರು.

ADVERTISEMENT

‘ಭೂ ಹಗರಣದ ತನಿಖೆಗೆ ಮುಂದಾಗಿದ್ದೇ ನನ್ನ ವರ್ಗಾವಣೆಗೆ ಕಾರಣ ಎಂದು ರೋಹಿಣಿ ಸಿಂಧೂರಿ ಹೇಳಿದ್ದಾರೆ. ಜಿಲ್ಲಾಧಿಕಾರಿ ಹುದ್ದೆಯಲ್ಲಿ ಶಿಲ್ಪಾನಾಗ್ ಅವರನ್ನು ಕೂರಿಸುವ ಪ್ರಯತ್ನ ವಿಫಲವಾದಾಗ ಇಬ್ಬರೂ ಅಧಿಕಾರಿಗಳನ್ನು ಬಿಜೆಪಿಯ ಸಂಸದ, ಶಾಸಕರು ಎತ್ತಿ ಕಟ್ಟಿದರು’ ಎಂದು ಸಿದ್ದರಾಮಯ್ಯ ಅವರು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.