ADVERTISEMENT

ಬೆಂಗಳೂರು: ಐಎಎಸ್‌ ಅಧಿಕಾರಿಗಳ ವರ್ಗಾವಣೆ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 16:14 IST
Last Updated 12 ಸೆಪ್ಟೆಂಬರ್ 2025, 16:14 IST
   

ಬೆಂಗಳೂರು: ಐಎಎಸ್‌ ಅಧಿಕಾರಿ ತುಳಸಿ ಮದ್ದಿನೇನಿ ಅವರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.

ತುಳಸಿ ಅವರಿಗೆ ಕರ್ನಾಟಕ ಮೇಲ್ಮನವಿ ಪ್ರಾಧಿಕಾರದ ಅಧ್ಯಕ್ಷರ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯನ್ನೂ ನೀಡಲಾಗಿದೆ. ಹುದ್ದೆ ನಿರೀಕ್ಷಣೆಯಲ್ಲಿದ್ದ ಪ್ರಶಾಂತ್ ಕುಮಾರ್ ಮಿಶ್ರಾ ಅವರಿಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹುದ್ದೆ ನೀಡಿ ಆದೇಶ ಹೊರಡಿಸಿದೆ.

ಯೋಜನೆ, ಕಾರ್ಯಕ್ರಮ ಮತ್ತು ಸಾಂಖ್ಯಿಕ ಇಲಾಖೆ ಕಾರ್ಯದರ್ಶಿ ರಮಣದೀಪ್‌ ಚೌಧರಿ ಅವರಿಗೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.