
ಪ್ರಜಾವಾಣಿ ವಾರ್ತೆವರ್ಗಾವಣೆ
ಬೆಂಗಳೂರು: ಐಎಎಸ್ ಅಧಿಕಾರಿ ಖುಶ್ಬೂ ಜಿ. ಚೌಧರಿ ಅವರನ್ನು ಶಿಕ್ಷಣ ಇಲಾಖೆಯ (ಉನ್ನತ ಶಿಕ್ಷಣ) ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶಿಸಿದೆ.
ಅವರಿಗೆ, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ನೀಡಲಾಗಿದೆ.
ರಾಷ್ಟ್ರೀಯ ಜೀವನೋಪಾಯ ಮಿಷನ್‌ನ ಯೋಜನಾ ನಿರ್ದೇಶಕಿ ಆರ್.ಸ್ನೇಹಲ್ ಅವರಿಗೆ 5ನೇ ಹಣಕಾಸು ಆಯೋಗದ ಕಾರ್ಯದರ್ಶಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ. ಮುಖ್ಯ ಕಾರ್ಯದರ್ಶಿಯ ವಿಶೇಷಾಧಿಕಾರಿ ಪಲ್ಲವಿ ಅಕುರಾತಿ ಅವರಿಗೆ ಸಕಾಲದ ಹೆಚ್ಚುವರಿ ಯೋಜನಾ ನಿರ್ದೇಶಕಿ ಹುದ್ದೆಯ ಹೆಚ್ಚುವರಿ ಹೊಣೆ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.