ವರ್ಗಾವಣೆ
ಬೆಂಗಳೂರು: ಐಎಎಸ್ ಅಧಿಕಾರಿ ಸಮೀರ್ ಶುಕ್ಲಾ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಅವರಿಗೆ, ದೆಹಲಿಯಲ್ಲಿನ ಕರ್ನಾಟಕ ಭವನದ ಕಾರ್ಯದರ್ಶಿ (ಸಮನ್ವಯ) ಹುದ್ದೆಯ ಹೆಚ್ಚುವರಿ ಹೊಣೆಯನ್ನೂ ನೀಡಲಾಗಿದೆ.
ಹುದ್ದೆ ನಿರೀಕ್ಷೆಯಲ್ಲಿದ್ದ ರೋಹಿಣಿ ಸಿಂಧೂರಿ ಅವರನ್ನು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ (ಎಂಎಸ್‌ಎಂಇ ಮತ್ತು ಗಣಿ) ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.