ವರ್ಗಾವಣೆ
ಬೆಂಗಳೂರು: ಆರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಮಂಗಳವಾರ ಆದೇಶ ಹೊರಡಿಸಿದೆ.
ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದ (ಇಡಿಸಿಎಸ್) ನಿರ್ದೇಶಕಿ ಅಪರ್ಣಾ ರಮೇಶ್ ಅವರನ್ನು ವಾಣಿಜ್ಯ ತೆರಿಗೆ ಇಲಾಖೆ ಸೇವಾ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದ್ದು, ಇ–ಆಡಳಿತ ಕೇಂದ್ರದ ಸಿಇಒ ಟಿ. ಭೂಬಾಲನ್ ಅವರಿಗೆ ಇಡಿಸಿಎಸ್‌ನ ಹೆಚ್ಚುವರಿ ಹೊಣೆಗಾರಿಕೆ ನೀಡಲಾಗಿದೆ.
ವಾಣಿಜ್ಯ ತೆರಿಗೆ ಇಲಾಖೆ ಸೇವಾ ವಿಭಾಗದ ಹೆಚ್ಚುವರಿ ಆಯುಕ್ತ ಕಾನಿಷ್ಕ ಅವರನ್ನು ಅದೇ ಇಲಾಖೆಯ ಅನುಷ್ಠಾನ ವಿಭಾಗಕ್ಕೆ, ಸ್ಥಳ ನಿರೀಕ್ಷೆಯಲ್ಲಿದ್ದ ಗಂಗೂಬಾಯಿ ಮಾನಕರ್ ಅವರನ್ನು ಕಾರ್ಮಿಕ ಇಲಾಖೆ ಇಎಸ್‌ಐಎಸ್ ಆಯುಕ್ತರ ಹುದ್ದೆಗೆ, ಎನ್. ಚಂದ್ರಶೇಖರ್ ಅವರನ್ನು ಕರ್ನಾಟಕ ಕೌಶಲ ಮಾರುಕಟ್ಟೆ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಹುದ್ದೆಗೆ, ಎಸ್.ಜೆ. ಸೋಮಶೇಖರ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.